ಬೆಂಕಿಗೆ ಹಾರಿದ್ದ ರಮೇಶ್ ಜಾರಕಿಹೊಳಿ ಅಭಿಮಾನಿಯ ಸ್ಥಿತಿ ಗಂಭೀರ
05/03/2021
ಬೆಳಗಾವಿ: ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಅವರ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವೇಳೆ ಕಾರ್ಯಕರ್ತನೋರ್ವ ಬೆಂಕಿ ಹಚ್ಚಿದ ಟೈಯರ್ ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಇದೀಗ ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಗೋಕಾಕ್ ನಗರದ ಚಿನವಾರ ಗಲ್ಲಿ ನಿವಾಸಿ 55 ವರ್ಷದ ಗಣಪತಿ ರಜಪೂತ ಗಂಭೀರ ಸ್ಥಿತಿಯಲ್ಲಿರುವ ಕಾರ್ಯಕರ್ತನಾಗಿದ್ದಾನೆ. ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ ಎಂದು ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಗಣಪತಿ ಬೆಂಕಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಗಂಭೀರ ಗಾಯಗೊಂಡಿದ್ದ ಗಣಪತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಯೂ ಅವರು, ರಮೇಶ್ ಜಾರಕಿಹೊಳಿ ಅಂತಹ ವ್ಯಕ್ತಿ ಅಲ್ಲ, ಅವರ ಯಾವುದೇ ತಪ್ಪು ಮಾಡಿಲ್ಲ. ಈ ಪ್ರಕರಣ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಗಣಪತಿಯ ಆರೋಗ್ಯ ಇನ್ನಷ್ಟು ಹದಗೆಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.