ವಯನಾಡ್ ಭೂಕುಸಿತ ಪ್ರಕರಣ: ಸಾವಿನ ಸಂಖ್ಯೆ 151ಕ್ಕೆ ಏರಿಕೆ
ಕೇರಳದ ವಯನಾಡ್ ಹವಾಮಾನ ವೈಪರೀತ್ಯದಿಂದ ತತ್ತರಿಸಿದೆ. ಪ್ರವಾಹ ಮತ್ತು ಮಳೆ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಭೂಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 151 ಕ್ಕೆ ಏರಿದೆ. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿರೋಧ ಪಕ್ಷದ ನಾಯಕ ಮತ್ತು ವಯನಾಡ್ ಮಾಜಿ ಸಂಸದ ರಾಹುಲ್ ಗಾಂಧಿ ಮತ್ತು ವಯನಾಡ್ ನ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಹವಾಮಾನ ವೈಪರೀತ್ಯದಿಂದಾಗಿ ತಮ್ಮ ಭೇಟಿಯನ್ನು ಸದ್ಯಕ್ಕೆ ರದ್ದುಗೊಳಿಸಿದ್ದಾರೆ.
ಜುಲೈ 31 ಮತ್ತು ಆಗಸ್ಟ್ 1 ರಂದು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಅರೇಬಿಯನ್ ಸಮುದ್ರದಲ್ಲಿ ತಾಪಮಾನದ ಹೆಚ್ಚಳವು ಕೇರಳದಲ್ಲಿ ಹೆಚ್ಚಿನ ಮಳೆಗೆ ಕಾರಣವಾಗುತ್ತಿದೆ. ಆಗಸ್ಟ್ 2 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ, ಕೇರಳದಲ್ಲಿ ಇಂದು 30-40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ.
ವಯನಾಡ್ ನ ಮೆಪ್ಪಾಡಿ ಪಂಚಾಯತ್ ವ್ಯಾಪ್ತಿಯ ವೆಲ್ಲಾರಿಮಾಲಾ ಗ್ರಾಮದ ಮುಂಡಕ್ಕೈ ಮತ್ತು ಚೂರಮಾಲಾ ಪ್ರದೇಶಗಳಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಭಾರಿ ಭೂಕುಸಿತಗಳು ಸಂಭವಿಸಿವೆ. ಭೂಕುಸಿತವು ಹಲವಾರು ಮನೆಗಳನ್ನು ನಾಶಪಡಿಸಿತು. ಮರಗಳನ್ನು ಬುಡಮೇಲು ಮಾಡಿತು ಮತ್ತು ಜಲಮೂಲಗಳು ಉಕ್ಕಿ ಹರಿಯಲು ಕಾರಣವಾಯಿತು. ಇದು ರಕ್ಷಣಾ ಪ್ರಯತ್ನಗಳನ್ನು ಸಂಕೀರ್ಣಗೊಳಿಸಿತು. ಘಟನೆಯಲ್ಲಿ ಒಟ್ಟು 128 ಜನರು ಗಾಯಗೊಂಡಿದ್ದು, ವಯನಾಡ್ ನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth