6 ಸಚಿವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಆದೇಶ! - Mahanayaka
2:15 AM Wednesday 11 - December 2024

6 ಸಚಿವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಆದೇಶ!

06/03/2021

ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು  ಕೋರಿ ಸಿಎಂ ಯಡಿಯೂರಪ್ಪ ಸಂಪುಟದ 6 ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮಾರ್ಚ್ 30ರವರೆಗೆ ಮಾನಹಾನಿಕರ ಸುದ್ದಿಗಳ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ರಮೇಶ್ ಜಾರಕಿಹೊಳಿ ಸಿಡಿ ವಿವಾದದ ಬಳಿಕ, ಇನ್ನೂ ಹಲವು ಸಚಿವರಿಗೆ ಸಿಡಿ ಭೀತಿ ಇದ್ದು, ಈ ಹಿನ್ನೆಲೆಯಲ್ಲಿ ಸುದ್ದಿ ಅಥವಾ ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರವಾಗುವ ಮೊದಲೇ ನಿರ್ಬಂಧವನ್ನು ವಿಧಿಸುವಂತೆ ಕೋರಿ 6 ಸಚಿವರು  ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಿಡೆಸಿದ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನ ಸಿಸಿಹೆಚ್-20ರ ನ್ಯಾಯಾಧೀಶ ಬಿ.ಎಸ್.ವಿಜಯಕುಮಾರ್ ಅವರು ಅರ್ಜಿಯನ್ನು ಮಾನ್ಯಮಾಡಿ, ಆರು ಸಚಿವರ ಬಗ್ಗೆ ಯಾವುದೇ ಮಾನಹಾನಿಕರ  ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿ, ಮಾಧ್ಯಮಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಯಲ್ಲಿ ಮಾರ್ಚ್ 30ಕ್ಕೆ ಮುಂದೂಡಿದೆ.

ಇತ್ತೀಚಿನ ಸುದ್ದಿ