ಮೋಡ ಕವಿದ ವಾತಾವರಣ, ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ: ಹೀಗಿದೆ ಹವಾಮಾನ ವರದಿ
ಆಗಸ್ಟ್ 10ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಇಲ್ಲಿ ನೀಡಲಾಗಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. (ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ). ಉತ್ತರ ಕನ್ನಡ ಬೆಳಿಗ್ಗೆಯಿಂದ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು ಮೋಡ ಕವಿದ ವಾತಾವರಣದ ಮುನ್ಸೂಚನೆಯೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಮೈಸೂರು, ಚಾಮರಾಜನಗರ (ಅಲ್ಲಲ್ಲಿ ಸಾಮಾನ್ಯ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ಗದಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು, ಆಗಸ್ಟ್ 16ರ ವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಕೊರತೆ ಉಂಟಾಗುವ ಲಕ್ಷಣಗಳಿವೆ.
ಕರಾವಳಿಯಲ್ಲಿ ಆಗಸ್ಟ್ 12ರ ತನಕ ಹೆಚ್ಚಾಗಿ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ನಂತರ ಅದೂ ಕಡಿಮೆಯಾಗಬಹುದು. ಮುಂಗಾರು ಇನ್ನು ಸಧ್ಯಕ್ಕೆ ಚೇತರಿಕೆಯ ಲಕ್ಷಣಗಳಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth