ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು - Mahanayaka
3:27 PM Wednesday 22 - January 2025

ಪಿಕಪ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

acident 1
13/08/2024

ತೀರ್ಥಹಳ್ಳಿ: ಪಿಕಪ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಅಗಸರಕೋಣೆ ಬಳಿ ಸಂಭವಿಸಿದೆ.

ಅಗಸರಕೋಣೆಯ ಶರತ್ ಹಾಗೂ ಕೇರಳದ ಮೂಲದ ಸಂತೋಷ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಒಬ್ಬ ಹಾಗೂ ಪಿಕಪ್ ನಲ್ಲಿದ್ದ ಮತ್ತೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ನಂತರ ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದು, ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ