8ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿರುವ ಸಿಎಂ ಯಡಿಯೂರಪ್ಪ
08/03/2021
ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದ್ದು, ಹಣಕಾಸು ಮಂತ್ರಿಯಾಗಿರುವ ಸಿಎಂ ಯಡಿಯೂರಪ್ಪನವರು ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರು 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2020ರಲ್ಲಿ ಅವರು 7ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದರು. 2006ರಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿಯ ಸಂದರ್ಭದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಅವರು 2 ಬಾರಿ ಬಜೆಟ್ ಮಂಡನೆ ಮಾಡಿದ್ದರು.
ಸಂಪುಟ ಸದಸ್ಯರ ಸಿಡಿ ವಿವಾದ, ರಾಜ್ಯದ ಆರ್ಥಿಕ ಪರಿಸ್ಥಿತಿ, ವಿಪಕ್ಷಗಳ ಟೀಕೆಗೆ ಇವೆಲ್ಲದರ ನಡುವೆ ಸಿಎಂ ಯಡಿಯೂರಪ್ಪ ಇಂದು ಬಜೆಟ್ ಮಂಡನೆ ಮಾಡಲಿದ್ದಾರೆ.