ಅರಣ್ಯ ಒತ್ತುವರಿ ತೆರವು ಖಂಡಿಸಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಂದ್ ಗೆ ಕರೆ
ಚಿಕ್ಕಮಗಳೂರು: ಒತ್ತುವರಿ ತೆರವು ಸೇರಿದಂತೆ ರೈತ ವಿರೋಧಿ ಧೋರಣೆ ಖಂಡಿಸಿ, ಸರ್ಕಾರದ ವಿರುದ್ದ ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಧೋರಣೆ ಖಂಡಿಸಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ.
ಶೃಂಗೇರಿ, ಕೊಪ್ಪ, ಎನ್.ಆರ್‌ಪುರ ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು, ಮೂರು ತಾಲೂಕಿನ ವ್ಯಾಪ್ತಿಯಲ್ಲಿ ಬಂದ್ ಕರೆ ನೀಡಿರುವ ಸಂಘಟನೆಗಳು , ಇದೇ ತಿಂಗಳು 17 ರಂದು ಬಂದ್ ಆಚರಿಸಲು ತೀರ್ಮಾನಿಸಿದ್ದು, ಮಲೆನಾಡು ಹಿತ ರಕ್ಷಣಾ ಸಮಿತಿ, ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಬಂದ್ ಗೆ ಕರೆ ನೀಡಲಾಗಿದೆ.
ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವ ಖಂಡಿಸಿ, ಸರ್ಕಾರದ ವಿರುದ್ದ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಿದೆ. ಕೊಪ್ಪದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಲು ಸಂಘಟನೆಗಳು ಮುಂದಾಗಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: