KPSC ಯಿಂದ ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಡೈರೆಕ್ಟ್ ಲಿಂಕ್ ಬಿಡುಗಡೆ
ಕರ್ನಾಟಕ ಲೋಕಸೇವಾ ಆಯೋಗವು ( Karnataka Public Service Commission) ಕಳೆದ ಜುಲೈ ಕೊನೆಯ ವಾರದಲ್ಲಿ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ ಪಶು ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿತ್ತು.
ಈ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಕೃತವಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭ ಮಾಡಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಡೈರೆಕ್ಟ್ ಲಿಂಕ್ ಅನ್ನು ಲೇಖನದ ಕೊನೆಯ ಭಾಗದಲ್ಲಿ ನೀಡಿದ್ದೇವೆ ಹಾಗೂ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತ ಇತರೆ ಅರ್ಹತೆಗಳನ್ನು ಕೂಡ ಲೇಖನದ ಕೆಳಗಿನ ಭಾಗದಲ್ಲಿ ನೀಡಿದ್ದೇವೆ. ಅರ್ಜಿ ಸಲ್ಲಿಸುವವರು ಕೆಳಗಿನ ಸಂಪೂರ್ಣ ಮಾಹಿತಿಯನ್ನು ತಿಳಿದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ : ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಗ್ರೂಪ್ ಎ ವೃಂದದ ಪಶು ವೈದ್ಯಾಧಿಕಾರಿಗಳ ಹುದ್ದೆಗಳು, 58 ಬ್ಯಾಕ್ ಲಾಗ್ ಹುದ್ದೆಗಳನ್ನು ಸೇರಿಸಿ ಒಟ್ಟು 400 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ.
ಅರ್ಹತೆಗಳು ಏನೇನು?
ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವೆಟರ್ನರಿ ಸೈನ್ಸ್ ನಲ್ಲಿ ಪದವಿ ಮುಗಿಸಿರಬೇಕು ಅಥವಾ ಅನಿಮಲ್ ಹಸ್ಬೆಂಡರಿ ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ 18ರಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಓಬಿಸಿ ವರ್ಗದವರಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದವರಿಗೆ ಐದು ವರ್ಷಗಳ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ಪಾವತಿಸಬೇಕು, ಪ್ರವರ್ಗ 2a 2b 3a 3b ವರ್ಗದವರು 300 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು, ಮಾಜಿ ಸೈನಿಕ ವರ್ಗದವರು 50 ರೂಪಾಯಿ ಪಾವತಿಸಬೇಕು ಹಾಗೂ ಇನ್ನುಳಿದ ವರ್ಗದವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1 ವರ್ಗದವರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
KPSC Veterinary Doctor Recruitment 2024 – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಪ್ಟೆಂಬರ್ 9 2024 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹತೆಯನ್ನು ಒಳಗೊಂಡ ಎಲ್ಲಾ ಅಭ್ಯರ್ಥಿಗಳು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಲಾಗಿನ್ ಆಗಬೇಕು. ಒಂದು ವೇಳೆ ನೀವು ಇಲ್ಲಿಯವರೆಗೆ ನೋಂದಾಯಿಸಿಕೊಂಡಿಲ್ಲವೆಂದರೆ, ಹೊಸದಾಗಿ ನೋಂದಾಯಿಸಿಕೊಂಡು ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಲಿಂಕ್ : https://kpsc.kar.nic.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: