ಬಾಂಗ್ಲಾದೇಶದಲ್ಲಿ ರಾಜಕೀಯ ಸಂಘರ್ಷ: ಕೋಲಾರದ ಟೊಮೆಟೊ ಮೇಲೂ ಬಿಗ್ ಎಫೆಕ್ಟ್ - Mahanayaka
6:26 AM Saturday 19 - October 2024

ಬಾಂಗ್ಲಾದೇಶದಲ್ಲಿ ರಾಜಕೀಯ ಸಂಘರ್ಷ: ಕೋಲಾರದ ಟೊಮೆಟೊ ಮೇಲೂ ಬಿಗ್ ಎಫೆಕ್ಟ್

16/08/2024

ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಕೋಲಾರದ ಟೊಮೆಟೊ ಬೆಲೆಯ ಮೇಲೆಯೂ ಪರಿಣಾಮ ಬೀರಿದೆ. ಬಾಂಗ್ಲಾಗೆ ಟೊಮೆಟೊ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲ್ಲಿ ಬೆಲೆ ಕುಸಿದಿದೆ. ರೈತರು ನಷ್ಟದ ಸುಳಿಗೆ ಸಿಲುಕಿದ್ದಾರೆ.

ಭಾರತದ ಪೂರ್ವ ರಾಜ್ಯ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶಕ್ಕೆ ಕೋಲಾರದಿಂದಲೇ ಅತೀ ಹೆಚ್ಚು ಟೊಮೆಟೊ ಪೂರೈಕೆಯಾಗುತ್ತದೆ. ಆದರೆ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಬಂಗಾಳದ ವ್ಯಾಪಾರಿಗಳು ಟೊಮೆಟೋ ಖರೀದಿಸುತ್ತಿಲ್ಲ.

ಕಳೆದ ತಿಂಗಳು, ಕೋಲಾರದ ಮಾರುಕಟ್ಟೆಯಲ್ಲಿ ಬಾಕ್ಸ್‌ ಟೊಮೆಟೊ ಬೆಲೆ ಸುಮಾರು 1,100 ಇತ್ತು. ಇದೀಗ, 350 ರಿಂದ 500 ರೂ.ಗೆ ಕುಸಿದಿದೆ. ಕೆ.ಜಿ ಟೊಮೆಟೊ ಬೆಲೆ 40 ರೂ.ನಿಂದ 12 ರೂ. ಇಳಿಕೆಯಾಗಿದೆ. ಬೆಲೆ ಕುಸಿತವು ಟೊಮೆಟೊ ಬೆಳೆದಿದ್ದ ರೈತರನ್ನು ಕಂಗಲಾಗಿಸಿದೆ.

ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತು ಮಾಡುವ ಪಶ್ಚಿಮ ಬಂಗಾಳದ ವ್ಯಾಪಾರಿಗಳು ಟೊಮೆಟೊ ಖರೀದಿಯಲ್ಲಿ ಶೇ.50ರಷ್ಟನ್ನು ಕಡಿತಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಸುಮಾರು 4,000 ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೊ ಬೆಳಯಲಾಗುತ್ತಿದೆ. ಪಶ್ಚಿಮ ಬಂಗಾಳ ಮಾತ್ರವಲ್ಲದೆ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೂ ಕೋಲಾರದಿಂದ ಟೊಮೆಟೊ ಪೂರೈಕೆಯಾಗುತ್ತದೆ. ಕೋಲಾರ ಜಿಲ್ಲೆಯಲ್ಲಿ ಈ ವರ್ಷ ಸಾಧಾರಣ ಮಳೆಯಾಗಿದ್ದು, ಟೊಮೆಟೊ ಇಳುವರಿ ಉತ್ತಮವಾಗಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ