ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ: ಆರ್.ಅಶೋಕ್ - Mahanayaka

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ: ಆರ್.ಅಶೋಕ್

r ashok
17/08/2024

ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ವ್ಯಕ್ತಿಯ ವಿರುದ್ಧವಲ್ಲ, ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದು ಹೇಳಿದರು.

ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ