ಸಿದ್ದರಾಮಯ್ಯನವರಿಗೆ ಆ ಬಂಡೆಯೇ ಡೇಂಜರ್: ಡಿಕೆಶಿಗೆ ತಿರುಗೇಟು ನೀಡಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಯಾರೋ ಒಬ್ಬರು ಸಿದ್ದರಾಮಯ್ಯ ರಕ್ಷಣೆಗೆ ಬಂಡೆಯಂತೆ ನಿಲ್ಲುವೆ ಎಂದಿದ್ದಾರೆ. ಆದರೆ ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಅಪಾಯ ಅಂತ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಇತ್ತೀಚೆಗೆ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿ, ಯಾರೋ ಒಬ್ಬರು ಸಿದ್ದರಾಮಯ್ಯನವರ ಜತೆ ಬಂಡೆಯಂತೆ ನಿಲ್ಲುವೆ ಎಂದು ಸೋಗು ಹಾಕುತ್ತಿದ್ದಾರೆ. ಆ ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಡೇಂಜರ್, ಆ ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಈ ಗತಿ ಬಂದಿದೆ ಎಂದರು.
ವೈನಾಡು, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಿ ಭೂ ಕುಸಿತ ಉಂಟಾಯಿತಲ್ಲ, ಆ ಮಣ್ಣಿನ ಜತೆ ಬಂದು ಬಿದ್ದವಲ್ಲ ಬಂಡೆಗಳು, ಅವೇ ಜನರ ಜೀವ ಜೀವ ತೆಗೆದಿದ್ದು. ಸಿದ್ದರಾಮಯ್ಯ ಅವರಿಗೆ ಬಂಡೆಯಿಂದಲೇ ಪತನ ಶುರುವಾಗಿದೆ ಎಂದು ಕೇಂದ್ರ ಸಚಿವರು ಮಾರ್ಮಿಕವಾಗಿ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: