ಗಮನಿಸಿ ಈ ಬ್ಯಾಂಕ್ ನಲ್ಲಿದೆ ಭರ್ಜರಿ ಉದ್ಯೋಗಾವಕಾಶಗಳು: ತಡಮಾಡದೇ ಅರ್ಜಿ ಸಲ್ಲಿಸಿ
ಸಾರ್ವಜನಿಕ ವಲಯದಲ್ಲಿ ಪ್ರಮುಖ ಬ್ಯಾಂಕ್ ಆಗಿರುವಂತಹ ಇಂಡಿಯನ್ ಬ್ಯಾಂಕ್ ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವಂತಹ ಸಂಪೂರ್ಣ ನೇಮಕಾತಿ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
lndian Bank Local Bank Officers Recruitment 2024:
ಇಂಡಿಯನ್ ಬ್ಯಾಂಕ್ ನಲ್ಲಿ ಒಟ್ಟು 300 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿರುವ 300 ಹುದ್ದೆಗಳಲ್ಲಿ 30 ಹುದ್ದೆಗಳನ್ನು ಮೀಸಲೀಡಲಾಗಿದೆ. ಉಳಿದ ಹುದ್ದೆಗಳನ್ನು ತಮಿಳುನಾಡು, ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ ಮತ್ತು ಪುದುಚೇರಿ ರಾಜ್ಯಗಳಿಗೆ ಹಂಚಲಾಗಿದೆ.
ಅರ್ಹತೆಗಳು :
ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಸ್ಥಳೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪದವಿ ಶಿಕ್ಷಣ ಹೊಂದಿರಬೇಕು. ಅದರ ಜೊತೆಗೆ ಯಾವ ರಾಜ್ಯಕ್ಕೆ ಅರ್ಜಿ ಸಲ್ಲಿಸುತ್ತಿರೋ ಆ ರಾಜ್ಯದ ಸ್ಥಳೀಯ ಭಾಷೆಯನ್ನು ಮಾತನಾಡಲು ಬಲ್ಲವರಾಗಿರಬೇಕು.
Age limit — ಈ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 20ರಿಂದ 30 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವುದಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ಕೆಳಗಿನಂತೆ ಸಡಿಲಿಕೆ ನೀಡಲಾಗುತ್ತದೆ.
* ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ – 05
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 03
* ವಿಶೇಷಚೇತನ ವರ್ಗದ ಅಭ್ಯರ್ಥಿಗಳಿಗೆ – 10
* ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ – 05
ಮಾಸಿಕ ವೇತನ : 48,480 ರೂ. ಯಿಂದ 85,920 ರೂ. ವರೆಗೆ
ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಅರ್ಜಿ ಸಲ್ಲಿಸಿದವರಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಿ ಹಾಗೂ ನಂತರದಲ್ಲಿ ಸಂದರ್ಶ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಈ ಕೆಳಗಿನ ಶುಲ್ಕವನ್ನು ಪಾವತಿಸಬೇಕು:
* SC, ST & Pwd ವರ್ಗದವರು – ₹175/-
* ಉಳಿದ ವರ್ಗದ ಅಭ್ಯರ್ಥಿಗಳಿಗೆ – ₹1,000/-
ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ – 02 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಜಾಲತಾಣದ ಲಿಂಕ್ – https://www.indianbank.in/career/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: