NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ - Mahanayaka
10:12 PM Thursday 12 - December 2024

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

appliction
20/08/2024

NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ ಕ್ಯುಎಎಸಿ ವತಿಯಿಂದ ನಡೆಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಸದರಿ ಪರೀಕ್ಷೆಯ ಆನ್ ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in/ ವೆಬ್ ಸೈಟ್ ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್ ಲೈನ್ ನಲ್ಲಿ ಮಂಡಳಿಯ ವೆಬ್ ಸೈಟ್ನಲ್ಲಿ ಲಭ್ಯವಿರುವ NMMS ಲಾಗಿನ್ ನಲ್ಲಿ ಸಲ್ಲಿಸುವುದು. ಆನ್ ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್ ಸೈಟ್ ನಲ್ಲಿ ಲಭ್ಯವಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ ಕೆಎಸ್ ಕ್ಯುಎಎಸಿ ಕಚೇರಿಯ ದೂರವಾಣಿ ಸಂಖ್ಯೆ 080–23341615 ಅನ್ನು ಸಂಪರ್ಕಿಸಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ