ದುಷ್ಮನ್ ಕಹಾ ಹೈ ಅಂದ್ರೆ,  ಕಾಂಗ್ರೆಸ್ ಪಾರ್ಟಿ ತುಂಬಾ ಹೈ: ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವ್ಯಂಗ್ಯ - Mahanayaka
4:21 PM Thursday 26 - December 2024

ದುಷ್ಮನ್ ಕಹಾ ಹೈ ಅಂದ್ರೆ,  ಕಾಂಗ್ರೆಸ್ ಪಾರ್ಟಿ ತುಂಬಾ ಹೈ: ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವ್ಯಂಗ್ಯ

r ashok
21/08/2024

ಬೆಂಗಳೂರು: ದುಷ್ಮನ್ ಕಹಾ ಹೈ ಅಂದ್ರೆ,  ಕಾಂಗ್ರೆಸ್ ಪಾರ್ಟಿ ತುಂಬಾ ಹೈ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಪತ್ರಿಕೆಯೊಂದರ ವರದಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಸಿಎಂ ಸಿದ್ದರಾಮಯ್ ನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ.  ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ