ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬೆಂಗಾವಲಿಗೆ ಗುಂಡಿನ ದಾಳಿ
ಬುಲಂದರ್ ಶಹರ್: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಬೆಂಗಾವಲಿಗೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಸದರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಹಾಜಿ ಯಾಮಿನ್ ಪರ ಕ್ಯಾಂಪೇನ್ ಮಾಡುತ್ತಿದ್ದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಚಂದ್ರಶೇಖರ್ ಅಜಾದ್ ಅವರೇ ಟ್ವೀಟ್ ಮಾಡಿದ್ದಾರೆ.
ನಮ್ಮ ಅಭ್ಯರ್ಥಿಗಳು ಬುಲಂದರ್ ಶಹರ್ ನಲ್ಲಿ ಕಣಕ್ಕಿಳಿದಿರುವುದರಿಂದ ವಿರೋಧ ಪಕ್ಷಗಳು ಭಯಭೀತರಾಗಿದ್ದಾರೆ. ಇಂದಿನ ರ್ಯಾಲಿ ಅವರ ನಿದ್ದೆ ಕೆಡಿಸಿದೆ. ಈ ಕಾರಣಕ್ಕಾಗಿ ನನ್ನ ಬೆಂಗಾವಲಿನ ಮೇಲೆ ಹೇಡಿಗಳಂತೆ ಗುಂಡಿನ ದಾಳಿ ನಡೆಸಲಾಗಿದೆ. ಇದು ಅವರ ಸೋಲಿನ ಹತಾಶೆಯನ್ನು ತೋರಿಸುತ್ತದೆ. ವಾತಾವರಣ ಯಾವಾಗಲೂ ಕೆಟ್ಟದಾಗಿಯೇ ಇರಬೇಕು ಎಂದು ಅವರು ಬಯಸುತ್ತಾರೆ ಆದರೆ, ನಾವು ಅದನ್ನು ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್, ಈ ಘಟನೆ ನಡೆದಿರುವುದು ದೃಢಪಟ್ಟಿಲ್ಲ. ಆದರೆ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿಗಳಾಗಿವೆ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ