ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ: ಅಧಿಕಾರಿಗಳಿಂದ ಪರಿಶೀಲನೆ - Mahanayaka

ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ: ಅಧಿಕಾರಿಗಳಿಂದ ಪರಿಶೀಲನೆ

charrmadi
22/08/2024

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆ ಹಿನ್ನೆಲೆ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಬಂಡೆಗಳು ಉರುಳಿ ಬೀಳುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲೇ ಸಣ್ಣದಾಗಿ ಗುಡ್ಡಗಳ ಕುಸಿತ ಸಂಭವಿಸಿದೆ.

ಚಾರ್ಮಾಡಿ ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರು–ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಈ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗ್ತಿದೆ. ರಸ್ತೆಯಲ್ಲಿ ಅಡಿಗಟ್ಟಲೇ ನೀರು ಹರಿಯುವ ಮಟ್ಟಕ್ಕೆ ನೀರು ಸುರಿದಿತ್ತು. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದ್ದು, ಗುಡ್ಡ ಕುಸಿದು ಬಂಡೆಕಲ್ಲುಗಳು ರಸ್ತೆ ಉರುಳಿವೆ.

ಘಟನೆ ಹಿನ್ನೆಲೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ವಾಹನ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ