ಇಂಡಿಯನ್ ಓವರ್ ಸಿಸ್ ಬ್ಯಾಂಕಿನಲ್ಲಿ ಭರ್ಜರಿ 550 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಡೈರೆಕ್ಟ್ ಲಿಂಕ್ ಇಲ್ಲಿದೆ
Indian Overseas Bank Recruitment 2024 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಭಾರತ ದೇಶಾದ್ಯಂತ ಇರುವ ಇಂಡಿಯನ್ ಓವರ್ಸೀಸ್ ಬ್ಯಾಂಕಿನಲ್ಲಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಭಾರತ ದೇಶಾದ್ಯಂತ ಒಟ್ಟು 550 ಹುದ್ದೆಗಳು ಖಾಲಿ ಇವೆ.
ಕರ್ನಾಟಕ ರಾಜ್ಯಕ್ಕೆ 50 ಹುದ್ದೆಗಳ ಮೀಸಲಾತಿ:
ಒಟ್ಟು 550 ಹುದ್ದೆಗಳಲ್ಲಿ ಕರ್ನಾಟಕ ರಾಜ್ಯಕ್ಕೆ 50 ಹುದ್ದೆಗಳ ಮೀಸಲಾತಿ ನೀಡಲಾಗಿದೆ. ಅಂದರೆ ಕನ್ನಡ ಬಲ್ಲವರಿಗೆ ಮಾತ್ರ ಆದ್ಯತೆ ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಸ್ಟೈಪೆಂಡ್ ಹಾಗೂ ಇತರೆ ನೇಮಕಾತಿಯ ಪ್ರಮುಖ ಮಾಹಿತಿಗಳನ್ನು ಕೆಳಗಿನ ಭಾಗದಲ್ಲಿ ನೀಡಲಾಗಿರುತ್ತದೆ.
ಹುದ್ದೆಗಳ ವಿವರ – ಇಂಡಿಯನ್ ಓವರ್ ಸಿಸ್ ಬ್ಯಾಂಕಿನಲ್ಲಿ ಇರುವ ಹುದ್ದೆಗಳ ಹೆಸರು ಅಪ್ಪ್ರಂಟಿಸ್ ಹುದ್ದೆಗಳು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10,000 ದಿಂದ 15000 ರೂ. ವರೆಗೆ ಸ್ಟೈಪೆಂಡ್ ಕೂಡ ನೀಡಲಾಗುತ್ತದೆ.
ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 1ನೇ ಏಪ್ರಿಲ್ 2020 ರಿಂದ 1ನೇ ಆಗಸ್ಟ್ 2024 ರ ಅವಧಿಯಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಬೇಕು.
ವಯೋಮಿತಿಯ ಅರ್ಹತೆಗಳನ್ನು ನೋಡುವುದಾದರೆ ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 20ರಿಂದ 28 ವರ್ಷದ ವಯೋಮಿತಿಯಲ್ಲಿರಬೇಕು. ಇನ್ನೂ ಮೀಸಲಾತಿ ವರ್ಗಗಳಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷದಿಂದ 10 ವರ್ಷಗಳವರೆಗೆ ಸಡಿಲಿಕೆ ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಪರೀಕ್ಷೆ ನಡೆಸಿ ನಂತರದಲ್ಲಿ ಸ್ಥಳೀಯ ಭಾಷೆಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮುಖಾಂತರ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕದ ವಿವರ :
* ಸಾಮಾನ್ಯ, ಇತರೆ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ₹944 ರೂ. ಪಾವತಿಸಬೇಕು.
* ಪರಿಶಿಷ್ಟ ವರ್ಗಗಳಿಗೆ ಸೇರಿದವರು ಹಾಗೂ ಎಲ್ಲಾ ವರ್ಗದ ಮಹಿಳೆಯರು ₹708 ರೂ. ಅರ್ಜಿ ಶುಲ್ಕ ಪಾವತಿಸಬೇಕು.
* ವಿಶೇಷ ಚೇತನ ವರ್ಗದ ಅಭ್ಯರ್ಥಿಗಳು ₹472 ರೂ. ಪಾವತಿಸಬೇಕು.
ನೇಮಕಾತಿಯ ಪ್ರಮುಖ ದಿನಾಂಕಗಳ ಮಾಹಿತಿ :
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 10 ಸೆಪ್ಟೆಂಬರ್ 2024
* ಶುಲ್ಕ ಪಾವತಿಗೆ ಕೊನೆಯ ದಿನಾಂಕ – 15 ಸೆಪ್ಟೆಂಬರ್ 2024
* ಆನ್ಲೈನ್ ಪರಿಕ್ಷಾ ದಿನಾಂಕ – 22 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್: https://www.iob.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: