10ನೇ ತರಗತಿ—ಪದವಿ ಪೂರೈಸಿದವರಿಗೆ ಗ್ಯಾಸ್ ಅಥಾರಿಟಿ ಲಿಮಿಟೆಡ್ ನಲ್ಲಿದೆ ಉದ್ಯೋಗ: ಸಂಬಳ 1.38 ಲಕ್ಷ
Gas Authority of India Limited Recruitment 2024 — ಕೇಂದ್ರ ಸರ್ಕಾರದ ಮಹಾರತ್ನ ಕಂಪನಿಗಳಲ್ಲಿ ಒಂದಾಗಿರುವಂತಹ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಂದ ಹಿಡಿದು ಐಟಿಐ ಮುಗಿಸಿದ ಅಭ್ಯರ್ಥಿಗಳಿಗೆ ಹಾಗೂ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಸಿದ ಅರ್ಹತೆಗಳು, ಅಂತಿಮ ಆಯ್ಕೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ, ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಡೈರೆಕ್ಟ್ ಲಿಂಕ ಹಾಗೂ ಇನ್ನಿತರ ಪ್ರಮುಖ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
GAIL Recruitment 2024 – ನೇಮಕಾತಿ ಮಾಡಿಕೊಳ್ಳುತ್ತಿರಬಹುದು ಹುದ್ದೆಗಳ ವಿವರ :
ಒಟ್ಟು 391 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳು, ಫೋರ್ ಮನ್ ಹುದ್ದೆಗಳು ಹಾಗೂ ಟೆಕ್ನಿಷಿಯನ್ ಹುದ್ದೆಗಳನ್ನಾಗಿ ವಿಂಗಡಿಸಲಾಗಿದೆ.
ಅರ್ಹತೆಗಳ ವಿವರ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗಳಿಗೆ ನಿಗದಿಪಡಿಸಿರುವಂತೆ 10ನೇ ತರಗತಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ವಯೋಮಿತಿ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳುವುದಾದರೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷಗಳ ನಡುವೆ ಇರಬೇಕು. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಬರುವುದಾದರೆ ನಿಮಗೆ ವಯೋಮಿತಿ ಸಡಿಲಿಕೆ ಇರಲಿದೆ.
ಆಯ್ಕೆಯಾಗುವವರೆಗೆ ಸಿಗುವ ವೇತನ :
ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹24,500 ರಿಂದ ₹1,38,000 ರವರೆಗೆ ವೇತನವನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ವಿವರ :
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಸಮಯದಲ್ಲಿ ಮೊದಲು ಪರೀಕ್ಷೆ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರದಲ್ಲಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ತದನಂತರ ಟ್ರೇಡ್ ಟೆಸ್ಟ್ ಅಥವಾ ಕಂಪ್ಯೂಟರ್ ಸಾಮರ್ಥ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅಭ್ಯರ್ಥಿಗಳು ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಶುಲ್ಕ:
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು 50ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅಂಗವಿಕಲ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7, 2024 ಕೊನೆಯ ದಿನಾಂಕವಾಗಿದೆ. ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಈ ನಿಗದಿತ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ : www.gailonline.com/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: