ಶನಿವಾರದಿಂದ 4 ದಿನ ಬ್ಯಾಂಕ್ ಬಂದ್ | ಕಾರಣ ಏನು ಗೊತ್ತಾ? - Mahanayaka
10:32 PM Thursday 19 - September 2024

ಶನಿವಾರದಿಂದ 4 ದಿನ ಬ್ಯಾಂಕ್ ಬಂದ್ | ಕಾರಣ ಏನು ಗೊತ್ತಾ?

12/03/2021

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗಿಕರಣ ವಿರೋಧಿಸಿ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್ ಬಿಯು) ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಕಾರಣದಿಂದಾಗಿ 4 ದಿನಗಳ ಕಾಲ ಬ್ಯಾಂಕ್ ಗಳು ತೆರೆಯುವುದಿಲ್ಲ.

ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮಾರ್ಚ್ 13ರಂದು ಎರಡನೇ ಶನಿವಾರವಾಗಿದೆ. ಮಾರ್ಚ್ 14ರಂದು ಭಾನುವಾರದ ರಜೆಯಿದ್ದು, ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ದಿನಗಳ ಕಾಲ ಬ್ಯಾಂಕ್ ತೆರೆಯುವುದಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನ ಖಾಸಗಿಕರಣ ಮಾಡುತ್ತಿದೆ. ನಷ್ಟದಲ್ಲಿರುವ ಖಾಸಗಿ ಬ್ಯಾಂಕ್ ಗಳ ಜೊತೆಗೆ ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ವಿಲೀನ ಮಾಡುತ್ತಿದೆ. ಇದರಿಂದಾಗಿ ಈಗಾಗಲೇ ಸಾವಿರಾರು ಬ್ಯಾಂಕ್ ನೌಕರರು ಉದ್ಯೋಗ ಕಳೆದುಕೊಂಡಿದ್ದಾರೆ.


Provided by

ಇನ್ನೂ 2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್, ದೇಶದಲ್ಲಿ 1.75 ಲಕ್ಷ ಕೋಟಿ ರೂ.ಗಳಿಸುವ ಕೇಂದ್ರ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರ ಸರ್ಕಾರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಸಾರ್ವಜನಿಕ ವಲಯದ ಬ್ಯಾಂಕ್ ಗಳಿದ್ದರೆ, ಮಾರ್ಚ್ ವೇಳೆಗೆ ಸಾರ್ವಜನಿಕ ಬ್ಯಾಂಕ್ ಗಳ ಸಂಖ್ಯೆ ಕೇವಲ 12ಕ್ಕೆ ಇಳಿದಿದೆ. ಈ ಬ್ಯಾಂಕ್ ಗಳನ್ನೂ ಮಾರಾಟ ಮಾಡಲು ಕೇಂದ್ರ ಸರ್ಕಾರ ಇದೀಗ ಮುಂದಾಗಿದೆ. ಈ ಕಾರಣಕ್ಕಾಗಿ ಬ್ಯಾಂಕ್ ನೌಕರರು ಇದೀಗ ಪ್ರತಿಭಟನೆಗೆ ಇಳಿದಿದ್ದಾರೆ.

ಇತ್ತೀಚಿನ ಸುದ್ದಿ