SSLC ಪಾಸಾದವರಿಗೆ 1,476 ಹುದ್ದೆಗಳ ಭರ್ತಿ : ನಿಮ್ಮ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ತಿಳಿಯಿರಿ
Anganawadi Recruitment 2024 – ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ.
ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಯಾವ ಯಾವ ಹುದ್ದೆಗಳು ಖಾಲಿ ಇವೆ? ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆಗಳು ಹಾಗೂ ನೇಮಕಾತಿಯ ಇತರೆ ಸಂಪೂರ್ಣ ಮಾಹಿತಿಯನ್ನು ಲೇಖನದ ಕೆಳಗಿನ ಭಾಗದಲ್ಲಿ ನೀಡಲಾಗಿದೆ.
1,476 ಹುದ್ದೆಗಳ ಜಿಲ್ಲಾವಾರು ವಿಂಗಡಣೆ :
* ಮಂಡ್ಯ ಜಿಲ್ಲೆಯಲ್ಲಿ – 341 ಹುದ್ದೆಗಳು
* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ – 335 ಹುದ್ದೆಗಳು
* ರಾಯಚೂರು ಜಿಲ್ಲೆಯಲ್ಲಿ – 391 ಹುದ್ದೆಗಳು
* ರಾಮನಗರ ಜಿಲ್ಲೆಯಲ್ಲಿ – 216 ಹುದ್ದೆಗಳು
* ಉಡುಪಿ ಜಿಲ್ಲೆಯಲ್ಲಿ – 193 ಹುದ್ದೆಗಳು
ಒಟ್ಟು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ವಿಂಗಡಣೆ :
* ಅಂಗನವಾಡಿ ಕಾರ್ಯಕರ್ತೆ – 408 ಹುದ್ದೆಗಳು
* ಅಂಗನವಾಡಿ ಸಹಾಯಕಿ – 1068 ಹುದ್ದೆಗಳು
ವಿದ್ಯಾರ್ಹತೆ ಅರ್ಹತೆಗಳು : ಈ ನೇಮಕಾತಿಯ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸ್ ಆಗಿರಬೇಕು.
ವಯೋಮಿತಿ – ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷದ ವಯೋಮಿತಿಯಲ್ಲಿರಬೇಕು. ಮೀಸಲಾತಿ ವರ್ಗದವರಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ – ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ. ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ :
* ಅಂಗನವಾಡಿ ಕಾರ್ಯಕರ್ತೆಯಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 10,000/- ರೂಪಾಯಿ ಗೌರವ ಧನ ಸಿಗಲಿದೆ.
* ಅಂಗನವಾಡಿ ಸಹಾಯಕಿ ಆಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 5,000/- ರೂಪಾಯಿ ಗೌರವ ಧನ ಸಿಗಲಿದೆ.
ಅರ್ಜಿ ಸಲ್ಲಿಸಲು ಜಿಲ್ಲಾವಾರು ಕೊನೆಯ ದಿನಾಂಕಗಳು :
* ಮಂಡ್ಯ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು — 20 ಸೆಪ್ಟೆಂಬರ್ 2024
* ದಕ್ಷಿಣ ಕನ್ನಡ ಮತ್ತು ರಾಯಚೂರು ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು — 29 ಸೆಪ್ಟೆಂಬರ್ 2024
* ರಾಮನಗರ ಮತ್ತು ಉಡುಪಿ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು — 30 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸುವ ಲಿಂಕ್ : https://karnemakaone.kar.nic.in/abcd/ApplicationForm_JA_org.aspx