ಮಹಿಳೆಯನ್ನು ರಕ್ಷಿಸಲು ಆಟೋವನ್ನು ಮೇಲೆತ್ತಿದ ವಿದ್ಯಾರ್ಥಿನಿ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ - Mahanayaka
9:38 PM Saturday 21 - December 2024

ಮಹಿಳೆಯನ್ನು ರಕ್ಷಿಸಲು ಆಟೋವನ್ನು ಮೇಲೆತ್ತಿದ ವಿದ್ಯಾರ್ಥಿನಿ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

siddaramaiah
11/09/2024

ಬೆಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನ ಜಿಲ್ಲೆಯ ಕಿನ್ನಿಗೋಳಿ ಸಮೀಪ ನಡೆದಿತ್ತು. ಈ ವೇಳೆ ಬಾಲಕಿಯೊಬ್ಬಳು ಆಟೋದಡಿಸಿಲುಕಿದ್ದ ಮಹಿಳೆಯ ರಕ್ಷಣೆಗೆ ಆಟೋವನ್ನು ಎತ್ತಿದ ವಿಡಿಯೋ ವೈರಲ್ ಆಗಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಬಾಲಕಿಯ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಸ್ತೆಯಲ್ಲಿ ಆಟೋ ಬರುತ್ತಿದ್ದ ವೇಳೆ ಮಹಿಳೆ ಏಕಾಏಕಿ ರಸ್ತೆ ದಾಟಿದ್ದಾರೆ. ವೇಗ ನಿಯಂತ್ರಿಸಲಾಗದೇ ಅಪಘಾತ ತಡೆಯಲು ಆಟೋ ಚಾಲಕ ರಸ್ತೆಯ ಪಕ್ಕಕ್ಕೆ ಆಟೋ ತಿರುಗಿಸಿದ್ದಾನೆ. ಏಕಾಏಕಿ ನಡೆದ ಘಟನೆಯಲ್ಲಿ ಆಟೋ ಮಹಿಳೆಯ ಮೇಲೆಯೇ ಉರುಳಿ ಬಿದ್ದಿತ್ತು. ಅತ್ತ ಆಟೋ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಕೂಡ ಆಟೋದಡಿಯಲ್ಲಿ ಸಿಲುಕಿದ್ದರು. ಅವರು ಆಟೋವನ್ನು ಮೇಲೆತ್ತಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿ ಆಟೋವನ್ನು ಬಲವಾಗಿ ಮೇಲೆತ್ತಿರುವುದು ಕಂಡು ಬಂದಿದೆ.

ಸಿಎಂ ಮೆಚ್ಚುಗೆ:

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.   ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಅಂತ ಅವರು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ