ತರಗತಿಯಲ್ಲಿ ಕುಸಿದು ಬಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ರಾಯಚೂರು: ತರಗತಿಯಲ್ಲಿ ಪಾಠ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.
ಸಿರವಾರ ತಾಲೂಕಿನ ಅತ್ತನೂರು ಗ್ರಾಮದ ತರುಣ್ ಅತ್ತನೂರು (14) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತ 8ನೇ ತರಗತಿಯಲ್ಲಿ ಓದುತ್ತಿದ್ದ. ತರುಣ್ ಎಂದಿನಂತೆಯೇ ಶಾಲೆಗೆ ಆಗಮಿಸಿದ್ದ. ಆದರೆ ಶಾಲೆಯಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದಿದ್ದಾನೆ.
ತಕ್ಷಣವೇ ಶಾಲೆಯ ಶಿಕ್ಷಕರು, ಸಿಬ್ಬಂದಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಆತನನ್ನ ದಾಖಲು ಮಾಡಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದ ವೇಳೆ ಮಾರ್ಗ ಮಧ್ಯೆ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: