ಪತ್ನಿ ಜೊತೆ ತೆರಳುತ್ತಿದ್ದ ವೇಳೆ ಖ್ಯಾತ ನಟ ಜೀವಾ ಕಾರು ಅಪಘಾತ!
ತಮಿಳಿನ ಖ್ಯಾತ ನಟ ಜೀವಾ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರು ವೇಗವಾಗಿ ಹೋಗುತ್ತಿದ್ದ ವೇಳೆ ಏಕಾಏಕಿ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಅಪಘಾತ ತಪ್ಪಿಸುವ ಭರದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಕಲ್ಲಕುರಿಚಿ ಜಿಲ್ಲೆಯ ಚಿನ್ನಸೇಲಂ ಬಳಿ ಈ ಅಪಘಾತ ನಡೆದಿದೆ. ನಟ ಜೀವಾ ಕಾರು ಅಪಘಾತದ ಸುದ್ದಿ ಕೇಳಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ ಘಟನೆ ನಡೆದಿದೆ.
ನಟ ಜೀವಾ ತನ್ನ ಪತ್ನಿಯ ಜೊತೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಅವರಿಗೆ ಯಾವುದೇ ಅಪಾತ ಸಂಭವಿಸಿಲ್ಲ.
ಅಪಘಾತದ ಪರಿಣಾಮ ಸ್ಥಳದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಕ್ಷಣವೇ ಟ್ರಾಫಿಕ್ ಪೊಲೀಸರು ಮಧ್ಯ ಪ್ರವೇಶಿಸಿ ಟ್ರಾಪಿಕ್ ಕ್ಲೀಯರ್ ಮಾಡಿದರು. ಅಪಘಾತದ ತೀವ್ರತೆಗೆ ಜೀವಾ ಅವರ ಕಾರು ನಜ್ಜುಗುಜ್ಜಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: