250 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ಆಸಕ್ತರು ಬೇಗ ಅರ್ಜಿ ಸಲ್ಲಿಸಿ
NTPC Deputy Manager Jobs – ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ವಿವಿಧ 250 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಅರ್ಹತೆ ಮತ್ತು ವಿವಿಧ ಮಾಹಿತಿಯನ್ನು ತಿಳಿದುಕೊಂಡು ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಖಾಲಿ ಇರುವ ಹುದ್ದೆಗಳ ಮಾಹಿತಿ :
ಈ ಒಂದು ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಒಟ್ಟು 250 ಹುದ್ದೆಗಳು ಖಾಲಿ ಇವೆ. ಖಾಲಿ ಇರುವ ಹುದ್ದೆಗಳ ವಿಭಾಗವಾರು ವಿಂಗಡಣೆಯು ಈ ಕೆಳಗಿನಂತಿದೆ.
* ಸಿವಿಲ್ ಕನ್ಸ್ಟ್ರಕ್ಷನ್ ವಿಭಾಗದಲ್ಲಿ – 75 ಹುದ್ದೆಗಳು
* ಎರೆಕ್ಷನ್ ವಿಭಾಗದಲ್ಲಿ – 35 ಹುದ್ದೆಗಳು
* ಮೆಕಾನಿಕಲ್ ಎರೆಕ್ಷನ್ ವಿಭಾಗದಲ್ಲಿ – 95 ಹುದ್ದೆಗಳು
* ಎಲೆಕ್ಟ್ರಿಕಲ್ ಎರೆಕ್ಷನ್ ವಿಭಾಗದಲ್ಲಿ – 45 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಸಿದ ಅರ್ಹತೆಗಳು :
NTPC Recruitment 2024 — ಖಾಲಿ ಇರುವ ವಿಭಾಗದ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ಬ್ರಾಂಚಿನಲ್ಲಿ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು ಮತ್ತು ಪದವಿಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು. ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸುವವರು ಗರಿಷ್ಠ 40 ವರ್ಷದ ವಯೋಮಿತಿ ಒಳಗಡೆ ಇರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :
* ಮೀಸಲಾತಿ ವರ್ಗಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
* ಇವರನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇತರೆ ಸಂಪೂರ್ಣ ಮಾಹಿತಿಗಾಗಿ ನೀವು ಕೆಳಗಿನ ಜಾಲತಾಣದ ವಿಳಾಸಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ — ಆನ್ಲೈನ್ ಮುಖಾಂತರ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಸಪ್ಟೆಂಬರ್ 28, 2024 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವ ಲಿಂಕು : https://ntpc.co.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: