ಸೈನಿಕ ಶಾಲೆಗಳಲ್ಲಿ ಭರ್ಜರಿ 8000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ - Mahanayaka
9:13 PM Wednesday 11 - December 2024

ಸೈನಿಕ ಶಾಲೆಗಳಲ್ಲಿ ಭರ್ಜರಿ 8000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

army school
15/09/2024

Army School Teacher’s Recruitment 2024 — ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇನಾ ಸಿಬ್ಬಂದಿಗಳ ಮಕ್ಕಳ ಶಿಕ್ಷಣಕ್ಕಾಗಿ ಇರುವಂತಹ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಮಿ ಸ್ಕೂಲ್ ಗಳಲ್ಲಿ ಖಾಲಿ ಇರುವ ಟೀಚರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ದೇಶಾದ್ಯಂತ ಒಟ್ಟು 139 ಆರ್ಮಿ ಸ್ಕೂಲ್ ಗಳಿದ್ದು, ನಮ್ಮ ಕರ್ನಾಟಕ ರಾಜ್ಯದಲ್ಲಿಯೂ ಕೂಡ ಬೆಳಗಾವಿ ಜಿಲ್ಲೆಯಲ್ಲಿ ಈ ಶಾಲೆ ಇದೆ. ಈ ಶಾಲೆಗಳಲ್ಲಿ ಒಟ್ಟು ಸದ್ಯಕ್ಕೆ 8,000ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ :
* ಪ್ರೈಮರಿ ಟೀಚರ್ ಹುದ್ದೆಗಳು
* ಪೋಸ್ಟ್ ಗ್ರಾಜುಯೇಟ್ ಟಿಚರ್
* ಟ್ರೈನಡ್ ಗ್ರಾಜುಯೇಟ್ ಟಿಚರ್

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು?

ಪೋಸ್ಟ್ ಗ್ರಾಜುವೇಟ್ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಪದವಿ ಶಿಕ್ಷಣದ ಜೊತೆಗೆ ಬಿಎಡ್ ಪದವಿ ಮುಗಿಸಿರಬೇಕು.

ಪ್ರೈಮರಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕೂಡ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಕೋರ್ಸ್ ನಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿ ಟಿ ಇ ಟಿ ಅಥವಾ ಟಿಇಟಿ ಅರ್ಹತೆ ಹೊಂದಿರಬೇಕು.

ವಯೋಮಿತಿ ಅರ್ಹತೆಗಳು: ಈ ನೇಮಕಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 40 ವರ್ಷದ ಒಳಗಿರಬೇಕು ಮತ್ತು ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.

ಹುದ್ದೆಗಳಿಗೆ ನೇಮಕಾತಿ ಹೇಗೆ ಮಾಡಿಕೊಳ್ಳಲಾಗುತ್ತದೆ?

ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಸ್ಕ್ರೀನಿಂಗ್ ಟೆಸ್ಟ್ ನಡೆಸಿ ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನಂತರದಲ್ಲಿ ಬೋಧನಾ ಪರೀಕ್ಷೆ ನಡೆಸುತ್ತಾರೆ. ಇವುಗಳಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.

ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 25, 2024 ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಸಿಗುವಂತಹ ಅಧಿಕೃತ ಅಧಿಸೂಚನೆಯನ್ನು ಮತ್ತೊಮ್ಮೆ ನೋಡಿಕೊಂಡು ಸಂಪೂರ್ಣ ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಿ.

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಕೆಯ ಲಿಂಕ್ : https://www.awesindia.com/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ