ಇನ್ನೆರಡು ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ - Mahanayaka
12:51 AM Wednesday 11 - December 2024

ಇನ್ನೆರಡು ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

kejriwal
15/09/2024

ನವದೆಹಲಿ:  ಇನ್ನೆರಡು ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿರುವ ಕೇಜ್ರಿವಾಲ್, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರ ಬಳಿ ಹೋಗಿ ಮತ್ತೆ ಜನಾಶೀರ್ವಾದ ಪಡೆದು ಅಧಿಕಾರಕ್ಕೆ ಬರುತ್ತೇನೆ. ಕೇಜ್ರಿವಾಲ್ ಪ್ರಾಮಾಣಿಕವಾಗಿದ್ದರೆ ಮತ್ತೆ ಆಪ್ ಗೆ ಮತ ಹಾಕಿ ಎಂದು ಅವರು ಕರೆ ನೀಡಿದರು.

ನವೆಂಬರ್ ನಲ್ಲಿ ದೆಹಲಿ ವಿಧಾನಸಭೆ ಚುನಾವಣೆಗೆ ಒತ್ತಾಯಿಸಲಾಗುತ್ತಿದೆ. ಆರೋಪಗಳನ್ನು ಹೊತ್ತು ಸಿಎಂ ಸ್ಥಾನದಲ್ಲಿ ಮುಂದುವರೆಯಲ್ಲ. ನಾನು ಪ್ರಾಮಾಣಿಕವಾಗಿದ್ದರೆ ಮಾತ್ರ ನನಗೆ ಆಶೀರ್ವಾದ ಮಾಡಿ ಮತ್ತೆ ಆಯ್ಕೆ ಮಾಡಿ ಎಂದು ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ