ಗಣೇಶೋತ್ಸವ ಮೆರವಣಿಗೆಯಲ್ಲಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿತ
ಬೆಳಗಾವಿ: ಗಣೇಶೋತ್ಸವ ವಿಸರ್ಜನೆ ವೇಳೆ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿದೆ.
ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳು ಗಾಯಗೊಂಡವರಾಗಿದ್ದಾರೆ. ಮೆರವಣಿಗೆ ವೇಳೆ ಕಾಲು ತಾಗಿತು ಎಂಬ ಕ್ಷ್ಯುಲ್ಲಕ ಕಾರಣಕ್ಕೆ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಲಾಗಿದೆ.
ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ದರ್ಶನ್ ಪಾಟೀಲ್, ಸತೀಶ್ ಪೂಜಾರಿಗೆ ಬಿಮ್ಸ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬೆನ್ನತ್ತಿ ಹಿಡಿದಿದ್ದಾರೆ. ಬೈಕ್ ನಲ್ಲಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳು ವಿಶ್ವೇಶ್ವರಯ್ಯನಗರದಲ್ಲಿ ಸೆರೆಯಾಗಿದ್ದಾರೆ. ಸಿಪಿಐ ವಿಶ್ವನಾಥ್ ಕಬ್ಬೂರ ಮತ್ತು ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಗಾಂಜಾ ಮತ್ತಿನಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: