ನನಗೆ ಕೆಲಸ ಕೊಡಿಸುವುದಾಗಿ ರಮೇಶ್ ಜಾರಕಿಹೊಳಿ ವಂಚಿಸಿದ್ದಾರೆ | ವಿಡಿಯೋ ಬಿಡುಗಡೆ ಮಾಡಿದ ಸಂತ್ರಸ್ತೆ - Mahanayaka
7:33 AM Thursday 12 - December 2024

ನನಗೆ ಕೆಲಸ ಕೊಡಿಸುವುದಾಗಿ ರಮೇಶ್ ಜಾರಕಿಹೊಳಿ ವಂಚಿಸಿದ್ದಾರೆ | ವಿಡಿಯೋ ಬಿಡುಗಡೆ ಮಾಡಿದ ಸಂತ್ರಸ್ತೆ

13/03/2021

ಬೆಂಗಳೂರು: ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ ರಮೇಶ್ ಜಾರಕಿಹೊಳಿ ವಂಚಿಸಿದ್ದಾರೆ ಎಂದು ಸಿಡಿಯಲ್ಲಿದ್ದ ಯುವತಿ ಹೇಳಿದ್ದಾಳೆ.  ಈ ಬಗ್ಗೆ ಇಂದು ವಿಡಿಯೋ ಬಿಡುಗಡೆ ಮಾಡಿರುವ ಸಂತ್ರಸ್ತೆ, ಈ ವಿಡಿಯೋದಿಂದ ನನ್ನ ಮಾನ ಹರಾಜಾಗಿದೆ ಎಂದು ಹೇಳಿದ್ದಾಳೆ.

ಈ ವಿಡಿಯೋದಿಂದಾಗಿ ನನ್ನ ತಂದೆ-ತಾಯಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದೇನೆ.  ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡಿ ಎಂದು ಯುವತಿ ಹೇಳಿದ್ದು, ಈ ವಿಡಿಯೋ ಹೇಗೆ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಯುವತಿ ಹೇಳಿದ್ದಾಳೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸದ್ಯ ಮುಕ್ತಾಯವಾಗುತ್ತಿದೆ ಎಂದು ಅಂದುಕೊಳ್ಳುತ್ತಿರುವಂತೆ ಮತ್ತೆ ಆರಂಭವಾಗುತ್ತಿದೆ. ಇದೀಗ ಸಂತ್ರಸ್ತೆ ಬಿಡುಗಡೆ ಮಾಡಿರುವ ವಿಡಿಯೋದಿಂದಾಗಿ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಇತ್ತೀಚಿನ ಸುದ್ದಿ