ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ: ಬಿಜೆಪಿ ನಾಯಕನಿಂದ ಹೇಳಿಕೆ
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸಿದ್ದು ನಾನೇ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ.
ಅಮೇರಿಕಾದಲ್ಲಿ ಮೀಸಲಾತಿ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ, ರಾಹುಲ್ ಗಾಂಧಿ ರಾಜೀನಾಮೆಗೆ ಒತ್ತಾಯಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ರು. ಮೋದಿಜಿ ಪಾರ್ಲಿಮೆಂಟ್ ಗೆ ಕರೆಸಿ ದೇಶದ ಜನರ ಕ್ಷಮೆ ಕೇಳುವಂತೆ ಹೇಳಿ ಕ್ಷಮೆ ಕೇಳಿದ್ದರು. ಆದ್ರೆ ಅವರು ಮತ್ತೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದರು. ಆಗ ನಾನೇ ನಮ್ಮ ಮುಖಂಡರಿಗೆ ಖಡಕ್ ಆಗಿ ಹೇಳಿದ್ದೆ. ಯಾವುದೇ ಕಾರಣಕ್ಕೂ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೊಡಬೇಡಿ ಅಂತ ಎಂದು ಅವರು ಹೇಳಿದ್ದಾರೆ.
ಸಂವಿಧಾನದ ವಿರುದ್ಧ ಮಾತನಾಡಿದವರಿಗೆ ಟಿಕೆಟ್ ಕೊಡದೇ ನಮ್ಮ ಬದ್ಧತೆ ಸಾಬೀತು ಮಾಡಿದ್ದೆವು. ಇಂದು ನಿಮ್ಮ ಸರದಿ, ನಿಮ್ಮ ತಾಕತ್ತು ತೋರಿಸಿ ಅಂತ ಕಾಂಗ್ರೆಸ್ ನಾಯಕರಿಗೆ ಅವರು ಸವಾಲು ಹಾಕಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: