ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಬಯಲಿಗೆಳೆದು ಸರ್ಕಾರವನ್ನೇ ನಡುಗಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಂಪಣ್ಣ ಅವರಿಗೆ 84 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು. ಆದ್ರೆ ಒಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದ 40 % ಕಮಿಷನ್ ಬಯಲಿಗೆಳೆಯುವಲ್ಲಿ ಕೆಂಪಣ್ಣ ಪ್ರಮುಖ ಪಾತ್ರ ವಹಿಸಿದ್ದರು. ಇದೇ ವಿಚಾರವಾಗಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಸರ್ಕಾರವನ್ನೇ ನಡುಗಿಸಿದ್ದರು.
ಬಳಿಕ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದರು. ಗುತ್ತಿಗೆದಾರರ ಬಿಲ್ಗಳನ್ನು ಕ್ಲಿಯರ್ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಹೋರಾಟ ಮಾಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: