ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!
19/09/2024
ಬೆಂಗಳೂರು: ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ.
ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ತನ್ನ ಮೇಲೆ ಮುನಿರತ್ನ ಮತ್ತಿತರರು ಅತ್ಯಾಚಾರ ನಡೆಸಿರುವುದಾಗಿ ನೊಂದ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: