ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ ಹೈಕೋರ್ಟ್ ಜಡ್ಜ್: ವರದಿ ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ: ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದ ಕರ್ನಾಟಕ ಹೈಕೋರ್ಟ್ ಜಡ್ಜ್ ನ್ನು ಸುಪ್ರೀಂ ಕೋರ್ಟ್(Supreme Court) ತರಾಟೆಗೆತ್ತಿಕೊಂಡಿದೆ.
ಈ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸುಪ್ರೀಂ ಕೋರ್ಟ್ ನ್ಯಾಯಪೀಠ ಸದ್ಯ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ರಿಂದ ವರದಿ ಕೇಳಿದ್ದು, ಅಟಾರ್ನಿ ಜನರಲ್ ಹಾಗೂ ಸಾಲಿಸಿಟರ್ ಜನರಲ್ ಅಭಿಪ್ರಾಯ ಕೇಳಿದೆ.
ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ, ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್ ಮಾರುಕಟ್ಟೆ ಮತ್ತು ಗೌರಿ ಪಾಳ್ಯ ವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನ(Pakistan) ದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಂಥವನೇ ಸ್ಟ್ರಿಕ್ಟ್ ಅಧಿಕಾರಿಗಳನ್ನು ಅಲ್ಲಿಗೆ ಹಾಕಿ, ಹಿಡಿದರೆ ನೋಡ್ತೀನಿ ಎಂದು ಹೇಳಿಕೆ ನೀಡಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು. ಇದೀಗ ಈ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: