ತಿರುಪತಿ ಲಡ್ಡು ವಿವಾದ: ಟಿಡಿಪಿ ಆರೋಪಕ್ಕೆ ಆಂಧ್ರಪ್ರದೇಶ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೇಂದ್ರ ಸರ್ಕಾರ
ಪವಿತ್ರ ತಿರುಪತಿ ಲಡ್ಡು ತಯಾರಿಕೆಯಲ್ಲಿ ಮಾಂಸಾಹಾರಿ ಪದಾರ್ಥಗಳನ್ನು ಬಳಸಿದರ ಬಗ್ಗೆ ತೆಲುಗು ದೇಶಂ ಪಕ್ಷ (ಟಿಡಿಪಿ) ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಆಂಧ್ರಪ್ರದೇಶ ಸರ್ಕಾರದಿಂದ ಸಮಗ್ರ ವರದಿಯನ್ನು ಕೇಳಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಕಳವಳ ವ್ಯಕ್ತಪಡಿಸಿದ್ದು, ಮಹತ್ವದ ರಾಜಕೀಯ ಮತ್ತು ಧಾರ್ಮಿಕ ವಿವಾದವನ್ನು ಹುಟ್ಟುಹಾಕಿರುವ ಆರೋಪಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಈ ಹಿಂದಿನ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ ಪಿ) ಆಡಳಿತವು ತಿರುಪತಿಯ ಪೂಜ್ಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಸಲು ಶುದ್ಧ ತುಪ್ಪದ ಬದಲು “ಬೀಫ್ ಟಾಲೋ”, “ಹಂದಿ ಕೊಬ್ಬು” ಮತ್ತು ಮೀನಿನ ಎಣ್ಣೆಯನ್ನು ಬಳಸಿದೆ ಎಂದು ಟಿಡಿಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದಾಗ ವಿವಾದ ಪ್ರಾರಂಭವಾಗಿದೆ. ನಾಯ್ಡು ಅವರ ಆರೋಪಗಳು ಪ್ರಚೋದನಕಾರಿಯಾಗಿವೆ.
ಯಾಕೆಂದರೆ ತಿರುಪತಿ ಲಡ್ಡುಗಳು ಕೇವಲ ಸಿಹಿತಿಂಡಿಗಳಲ್ಲ. ಅದನ್ನು ದೈವಿಕ ಪ್ರಸಾದವೆಂದು ಪರಿಗಣಿಸಲಾಗುತ್ತದೆ. ಇದು ಲಕ್ಷಾಂತರ ಭಕ್ತರಿಗೆ ಅಪಾರ ಧಾರ್ಮಿಕ ಮಹತ್ವವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth