ರೇಣುಕಾಸ್ವಾಮಿ ಕೇಸ್: ದರ್ಶನ್—ಪವಿತ್ರಾ ಜಾಮೀನು ಸದ್ಯಕ್ಕಿಲ್ಲ | ಕೋರ್ಟ್ ನಲ್ಲಿ ಏನು ನಡೆಯಿತು? - Mahanayaka
10:27 AM Thursday 12 - December 2024

ರೇಣುಕಾಸ್ವಾಮಿ ಕೇಸ್: ದರ್ಶನ್—ಪವಿತ್ರಾ ಜಾಮೀನು ಸದ್ಯಕ್ಕಿಲ್ಲ | ಕೋರ್ಟ್ ನಲ್ಲಿ ಏನು ನಡೆಯಿತು?

darshan
23/09/2024

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​—ಪವಿತ್ರಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಮತ್ತೆ ಮುಂದೂಡಿದೆ.

ಸೆಪ್ಟಂಬರ್ 27ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು  ಎಸ್ ಪಿಪಿ ಕಾಲಾವಕಾಶ ಕೇಳಿದ ಹಿನ್ನಲೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡಗೆ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದೇ ನಡೆದಿದೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ವಿಚಾರಣೆಯನ್ನು  ಸೆಪ್ಟೆಂಬರ್​ 25ಕ್ಕೆ ಮುಂದೂಡಿದ್ದಾರೆ.

ಇತ್ತೀಚಿನ ಸುದ್ದಿ