ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ: ರಿಟ್ ಅರ್ಜಿ ವಜಾ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -– MUDA ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಹಿನ್ನಡೆಯಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಲಾಗಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಭ್ರಷ್ಟಾಚಾರ ನಿಯಂತ್ರಣಾ ಕಾಯಿದೆ ಸೆಕ್ಷನ್ 17ಎ ಅಡಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿದ ಆದೇಶ ಸರಿ ಎಂದು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಆದೇಶದಲ್ಲಿ ತಿಳಿಸಿದೆ.
ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿ ಖಾಸಗಿ ದೂರುದಾರರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಬಹುದು. ರಾಜ್ಯಪಾಲರು ದೂರಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಧ್ಯಯನ ಮಾಡಿಯೇ ಅನುಮತಿ ನೀಡಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶ ಸಮರ್ಪಕವಾಗಿದೆ ಎಂದು ರಾಜ್ಯಪಾಲರ ನಿರ್ಧಾರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣೆ ವೇಳೆ ಸಮರ್ಥಿಸಿಕೊಂಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: