ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ: ಛಲವಾದಿ ನಾರಾಯಣ ಸ್ವಾಮಿ
ಮೈಸೂರು: ಮುಡಾ ಕೇಸ್ ಗೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನೋದು ಕೋರ್ಟ್ ಇಂದಿನ ಆದೇಶದಿಂದ ಖಾತ್ರಿಯಾಗಿದೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ, ರಾಜ್ಯದಲ್ಲಿ ಮಾತ್ರವಲ್ಲ, ರಾಷ್ಟ್ರಮಟ್ಟದಲ್ಲೂ ಹೋರಾಟ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.
ಸಿಎಂ ಕುಟುಂಬವೇ ಇಂತಹ ಅವ್ಯವಹಾರದಲ್ಲಿ ತೊಡಗಿರುವುದು ಇದೇ ಮೊದಲು. ಸಿದ್ದರಾಮಯ್ಯ ಅವರು 2 ಬಾರಿ ಡಿಸಿಎಂ ಆಗಿದ್ದವರು, ವಿಪಕ್ಷ ನಾಯಕರಾಗಿದ್ದವರು. 2ನೇ ಬಾರಿಗೆ ಮುಖ್ಯಮಂತ್ರಿ ಸಹ ಆಗಿದ್ದಾರೆ. ಅವರು ತಮ್ಮದೇ ಅಲ್ಲದ ಮುಡಾದ ಭೂಮಿಗೆ ಪರಿಹಾರ ಕೇಳಿದ್ದು ತಪ್ಪು ಎಂದರು.
ನಿಮ್ಮ ಹೈಕಮಾಂಡ್ ಸಪೋರ್ಟ್ ನಿಮಗಿದ್ದರೆ, ಸಿಎಂ ಮಾಡಬಹುದು ಅಷ್ಟೇ. ನ್ಯಾಯಾಲಯದಿಂದ ಪಾರು ಮಾಡೋಕೆ ಆಗಲ್ಲ. ಅವರಿಗೆ ನ್ಯಾಯಾಲಯ, ವ್ಯವಸ್ಥೆ, ಅಂಬೇಡ್ಕರ್, ಸಂವಿಧಾನದ ಬಗ್ಗೆ ಗೌರವ ಇದ್ದರೇ ರಾಜೀನಾಮೆ ಕೊಟ್ಟೇ ಕೊಡ್ತಾರೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97