ಇಸ್ರೋ ಸಂಸ್ಥೆಯಲ್ಲಿ SSLC ಪಾಸಾದವರಿಗೂ ಉದ್ಯೋಗಾವಕಾಶ | ISRO Recruitment 2024 - Mahanayaka
10:53 PM Wednesday 11 - December 2024

ಇಸ್ರೋ ಸಂಸ್ಥೆಯಲ್ಲಿ SSLC ಪಾಸಾದವರಿಗೂ ಉದ್ಯೋಗಾವಕಾಶ | ISRO Recruitment 2024

isro
25/09/2024

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬೆಂಗಳೂರಿನಲ್ಲಿ ಹಲವು ಉದ್ಯೋಗ ಅವಕಾಶಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಸ್ರೋ ಸಂಸ್ಥೆಯು ಅಧಿಸೂಚನೆ ಬಿಡುಗಡೆ ಮಾಡಿದೆ.

ISRO Recruitment 2024– ವಿವಿಧ ವಿಷಯಗಳಲ್ಲಿ ಡಿಪ್ಲೋಮಾ, ಪದವಿ ಸೇರಿದಂತೆ 10ನೇ ತರಗತಿ ಮುಗಿಸಿರುವಂತಹ ಅಭ್ಯರ್ಥಿಗಳಿಗೂ ಕೂಡ ಹಲವು ಉದ್ಯೋಗಾವಕಾಶಗಳಿವೆ. ಈ ನೇಮಕಾತಿಯಲ್ಲಿ ಒಟ್ಟು 99 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಸ್ರೋ ಸಂಸ್ಥೆಯು ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಸಂಪೂರ್ಣ ವಿವರವೂ ಇಲ್ಲಿದೆ.

ಹುದ್ದೆಗಳ ಹೆಸರು :

ಇಸ್ರೋ ಸಂಸ್ಥೆಯಲ್ಲಿ ಸೈಂಟಿಫಿಕ್ ಅಸಿಸ್ಟೆಂಟ್, ಅಸಿಸ್ಟೆಂಟ್, ಮೆಡಿಕಲ್ ಆಫೀಸರ್, ಸೈಂಟಿಸ್ಟ್, ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ವಿಭಾಗಗಳ ಒಟ್ಟು 99 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಹತೆಗಳು – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿಯನ್ನು ನೋಡುವುದಾದರೆ, ಕನಿಷ್ಠ 18ರಿಂದ ಗರಿಷ್ಠ 35 ವರ್ಷದ ಒಳಗಿನವರು ಮಾತ್ರ ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಬಹುದು. ಸಾಮಾನ್ಯವಾಗಿ ನೀಡುವಂತೆ ಮೀಸಲಾತಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?

ಅರ್ಜಿ ಸಲ್ಲಿಸಿದಂತಹ ಅರ್ಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯು ಕರ್ನಾಟಕ ರಾಜ್ಯದಲ್ಲಿಯೂ ಕೂಡ ಪರೀಕ್ಷಾ ಕೇಂದ್ರವನ್ನು ಹೊಂದಿದ್ದು ಅದರಲ್ಲಿ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ ಇರಲಿದೆ.

ಅರ್ಹರಿರುವ ಅಭ್ಯರ್ಥಿಗಳು ಅಕ್ಟೋಬರ್ 9, 2024ರ ಒಳಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣ : https://www.isro.gov.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ