ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ
ತುಮಕೂರು: ನಗರದ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗಟ್ಟಿ ಗಂಗಾಧರ್, ಹಿರಿಯ ಔಷಧಿಕಾರ, ಜಿಲ್ಲಾ ಆಸ್ಪತ್ರೆ, ಎನ್.ಎಸ್.ರಮೇಶ್ ಎನ್.ಎಸ್.ಮೆಡಿಕಲ್ಸ್ ಮತ್ತು ಎನ್.ರಾಜೇಂದ್ರ, ಜಿಲ್ಲಾ ಆಸ್ಪತ್ರೆ, ತುಮಕೂರು ರವರುಗಳು ಆಗಮಿಸಿ ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಕಾರ್ಯಕ್ರಮ ಅಧ್ಯಕ್ಷರಾದ ಡಾ.ಸುರೇಶ ವಿ. ಕುಲ್ಕರ್ಣಿ, ಪ್ರಾಂಶುಪಾಲರು ಫಾರ್ಮಸಿಸ್ಟ್ ರವರ ಪಾತ್ರ ಮತ್ತು ಜವಾಬ್ದಾರಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಮತ್ತು ಪ್ರಬಂಧ ಬರವಣಿಗೆಗೆಯನ್ನು ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳನ್ನೂ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಜವಾಬ್ದಾರಿಗಳನ್ನು ರವಿನಂದನ್, ಹೇಮಲತಾ, ಮಾನ್ಸಿ, ವಿಶ್ವಾಸ್, ಛಾಯಾ ಸಹಾಯಕ ಪ್ರಾಧ್ಯಾಪಕರುಗಳು ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಡಿ.ಫಾರ್ಮ ವಿದ್ಯಾರ್ಥಿಗಳು ಸಮುದಾಯದ ಫಾರ್ಮಾಸಿಸ್ಟ್ ಗಳನ್ನು ಭೇಟಿ ಮಾಡಿ ಅಭಿನಂದಿಸಿ, ಫಾರ್ಮಸಿಸ್ಟ್ ಪ್ರತಿಜ್ಞಾವಿಧಿ ಬೋಧಿಸಿ, ವಿಶ್ವ ಫಾರ್ಮಸಿಸ್ಟ್ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: