ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ
30/09/2024
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂಡಿಗೆರೆ ಮಾರ್ಗವಾಗಿಯೇ ಸಂಚರಿಸುತ್ತಿದ್ದರೂ ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಿದ್ದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ವಸ್ತು ಸಂಗ್ರಹಾಲಯ, ಕೀಟ ಸಂಗ್ರಹಾಲಯ, ಗ್ರಂಥಾಲಯಗಳು ಜ್ಞಾನಾಸಕ್ತರಿಗೆ ಉಪಯುಕ್ತವಾಗಿವೆ.
ಉತ್ತಮ ನಿರ್ವಹಣೆ ಮಾಡಲಾಗಿದ್ದು ಅಗತ್ಯವಿದ್ದಲ್ಲಿ ಪ್ರತಿಷ್ಠಾನದ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಅನುದಾನವನ್ನು ತರಲು ಪ್ರಯತ್ನಿಸಲಾಗುವುದು ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: