ಬಯಲು ಶೌಚಕ್ಕೆ ಬಂದಿದ್ದ ಬಾಲಕಿಯನ್ನು ಅಪಹರಿಸಿ ಕಾರಿನಲ್ಲಿ ಅತ್ಯಾಚಾರ ನಡೆಸಿದ ದುಷ್ಕರ್ಮಿ! - Mahanayaka
6:23 PM Thursday 12 - December 2024

ಬಯಲು ಶೌಚಕ್ಕೆ ಬಂದಿದ್ದ ಬಾಲಕಿಯನ್ನು ಅಪಹರಿಸಿ ಕಾರಿನಲ್ಲಿ ಅತ್ಯಾಚಾರ ನಡೆಸಿದ ದುಷ್ಕರ್ಮಿ!

16/03/2021

ಲಕ್ನೋ: ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಿಸಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಆಲಿಘಡ್ ಜಿಲ್ಲೆಯಲ್ಲಿ ನಡೆದಿದ್ದು,  ಆಲಿಘಡ್ ನಿಂದ 50 ಕಿ.ಮೀ. ದೂರದಲ್ಲಿರುವ ಗ್ಯಾಂಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪುಷ್ಪೇಂದ್ರ ಎಂಬಾತ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. 15 ವರ್ಷದ ಬಾಲಕಿ ಬಯಲು ಶೌಚ ಮಾಡಲು ಮನೆಯಿಂದ ಹೊರ ಬಂದಿದ್ದು, ಈ ವೇಳೆ ಆರೋಪಿಯು ಬಾಲಕಿಯನ್ನು ಅಲ್ಲಿಂದ ಎಳೆದುಕೊಂಡು ಹೋಗಿದ್ದಾನೆ.

ಬಳಿಕ ಕಾರಿನಲ್ಲಿ ಕೂಡಿಹಾಕಿ ಅತ್ಯಾಚಾರ ನಡೆಸಿದಿದ್ದು, ಬಾಲಕಿಗೆ ಕಿರುಚಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ.  ಆದರೂ ಸುಮ್ಮನಿರದ ಬಾಲಕಿ ಜೋರಾಗಿ ಕಿರುಚಿದ್ದು, ಈ ವೇಳೇ ಬಾಲಕಿಯ ಮಾವ ಸ್ಥಳಕ್ಕೆ ಬಂದು ತಡೆಯಲು ಯತ್ನಿಸಿದ್ದು, ಈ ವೇಳೆ ಆರೋಪಿಯು ಮಾವನಿಗೆ ಇರಿದು ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ಸಂತ್ರಸ್ತ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಐಪಿಸಿ ಸೆಕ್ಷನ್ ಅಡಿಯಲ್ಲಿ ಆರೋಪಿಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಸರ್ಕಲ್ ಆಈಸರ್ ಸುಮರ್ ಕನೋಜಿಯಾ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ