50 ಕೋಟಿ ರೂ.ಗೆ ಬೇಡಿಕೆ: ಕುಮಾರಸ್ವಾಮಿ ವಿರುದ್ಧ ಉದ್ಯಮಿಯಿಂದ ಗಂಭೀರ ಆರೋಪ
03/10/2024
ಬೆಂಗಳೂರು: 50 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿರು ವಿಜಯ್ ಟಾಟಾ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡ ರಮೇಶ್ ಬಾಬು ವಿರುದ್ಧ ದೂರು ನೀಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಉಪಚುನಾವಣೆಗೆ ನಿಲ್ಲುತ್ತಾರೆ. ಚುನಾವಣೆಗಾಗಿ 50 ಕೋಟಿ ರೂ. ನೀಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದರು. ಆದರೆ ಹಣ ಕೊಡದೇ ಇದ್ದರೆ ಪ್ರಾಜೆಕ್ಟ್ ಕಂಪ್ಲೀಟ್ ಮಾಡಲು ಬಿಡಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ವಿಜಯ್ ಟಾಟಾ ದೂರಿನಲ್ಲಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: