ಆಹಾರ ಅರಸಿ ಬಂದಿದ್ದ ಕಾಡಾನೆ ಕಂದಕಕ್ಕೆ ಬಿದ್ದು ಸಾವು!
04/10/2024
ಮೈಸೂರು: ನಾಡ ಹಬ್ಬ ದಸರಾ ಸಂದರ್ಭದಲ್ಲೇ ಕಾಡಾನೆಯೊಂದು ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ.
ಸಾವನ್ನಪ್ಪಿದ ಆನೆ ಸುಮಾರು 40 ವರ್ಷ ವಯಸ್ಸಿನ ಕಾಡಾನೆ ಎಂದು ಹೇಳಲಾಗಿದೆ. ಆಹಾರ ಅರಸಿ ಬಂದಿದ್ದ ಕಾಡಾನೆ ಕಂದಕಕ್ಕೆ ಬಿದ್ದಿದ್ದು, ಪರಿಣಾಮವಾಗಿ ದಾರುಣವಾಗಿ ಸಾವನ್ನಪ್ಪಿದೆ.
ಆನೆ ಹಾವಳಿಗಳನ್ನು ತಪ್ಪಿಸಲು ಕಂದಕಗಳನ್ನು ನಿರ್ಮಿಸಲಾಗಿತ್ತು ಎಂದು ಹೇಳಲಾಗಿದೆ. ಕಾಡಿನಿಂದ ಕಾಡಾನೆ ನಾಡಿಗೆ ಹೊರಟಿತ್ತು. ಈ ವೇಳೆ ಕಂದಕಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: