ಪಿಡಬ್ಲ್ಯೂಡಿ ಇಲಾಖೆಯಲ್ಲಿದೆ ಉದ್ಯೋಗ:  ಅರ್ಜಿ ಸಲ್ಲಿಸುವುದು ಹೇಗೆ? - Mahanayaka
4:11 PM Thursday 12 - December 2024

ಪಿಡಬ್ಲ್ಯೂಡಿ ಇಲಾಖೆಯಲ್ಲಿದೆ ಉದ್ಯೋಗ:  ಅರ್ಜಿ ಸಲ್ಲಿಸುವುದು ಹೇಗೆ?

jobs
05/10/2024

PWD AEE Recruitment 2024 :  ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ವತಿಯಿಂದ ನೇಮಕಾತಿ ಮಾಡಿಕೊಳ್ಳುತ್ತಿರುವ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಇದೀಗ ಅರ್ಜಿ ಸಲ್ಲಿಸುವ ಲಿಂಕನ್ನು ಕೂಡ ಬಿಡುಗಡೆ ಮಾಡಲಾಗಿದ್ದು, ಇದು ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯು ಇಲ್ಲಿದೆ..

ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಒಟ್ಟು 42 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ (Assistant Executive Engineer) ಹುದ್ದೆಗಳು ಖಾಲಿ ಇರುತ್ತವೆ.

* ಉಳಿಕೆ ಮೂಲ ವೃಂದ ವಿಭಾಗದಲ್ಲಿ – 30 ಹುದ್ದೆಗಳು

* ಹೈದರಾಬಾದ್ ಕರ್ನಾಟಕ ವಿಭಾಗದಲ್ಲಿ – 12 ಹುದ್ದೆಗಳು

ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳೇನು?

ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು.

ಅದೇ ರೀತಿ ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗದವರಿಗೆ 35 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷ, ಪ್ರವರ್ಗ 1 ಮತ್ತು ಪರಿಶಿಷ್ಟ ವರ್ಗದವರಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕದ ವಿವರ:  

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅದೇ ರೀತಿ ಹಿಂದುಳಿದ ವರ್ಗದವರು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು ರೂ. 50 ಅರ್ಜಿ ಶುಲ್ಕ ಪಾವತಿಸಬೇಕು. ಇವರನ್ನು ಹೊರತುಪಡಿಸಿ ಉಳಿದ ವರ್ಗದವರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಈ ಒಂದು ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 2, 2024 ಕೊನೆಯ ದಿನಾಂಕವಾಗಿರುತ್ತದೆ.

ಅರ್ಜಿ ಸಲ್ಲಿಸುವ ಲಿಂಕ್:  https://kpsc.kar.nic.in/


ಇನ್ನಷ್ಟು ಸುದ್ದಿಗಳು:

10th ಪಾಸಾದವರಿಗೆ ಉದ್ಯೋಗಾವಕಾಶ : ದೇಶದ ಅತ್ತ್ಯುನ್ನತ ಬ್ಯಾಂಕ್  ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಇಸ್ರೋ ಸಂಸ್ಥೆಯಲ್ಲಿ SSLC ಪಾಸಾದವರಿಗೂ ಉದ್ಯೋಗಾವಕಾಶ | ISRO Recruitment 2024

ದ್ವಿತೀಯ ಪಿಯುಸಿ ಪಾಸ್ ಆದವರಿಗೆ ನೌಕಾಪಡೆಯಲ್ಲಿ ಉದ್ಯೋಗಾವಕಾಶ: ವೇತನ ₹47,600/-

10ನೇ ತರಗತಿ—ಪದವಿ ಪೂರೈಸಿದವರಿಗೆ ಗ್ಯಾಸ್ ಅಥಾರಿಟಿ ಲಿಮಿಟೆಡ್ ನಲ್ಲಿದೆ ಉದ್ಯೋಗ: ಸಂಬಳ 1.38 ಲಕ್ಷ

ಗಮನಿಸಿ ಈ ಬ್ಯಾಂಕ್ ನಲ್ಲಿದೆ ಭರ್ಜರಿ ಉದ್ಯೋಗಾವಕಾಶಗಳು: ತಡಮಾಡದೇ ಅರ್ಜಿ ಸಲ್ಲಿಸಿ

ಇತ್ತೀಚಿನ ಸುದ್ದಿ