ಹೊಸ ಅಧ್ಯಾಯ: ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಉಮರ್ ಅಬ್ದುಲ್ಲಾ ಆಯ್ಕೆ
ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಉಮರ್ ಅಬ್ದುಲ್ಲಾ ಆಯ್ಕೆಯಾಗಿದ್ದಾರೆ. ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ರವರು ಒಮರ್ ಅಬ್ದುಲ್ಲಾರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ.
ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ 51ಕ್ಷೇತ್ರ, ಬಿಜೆಪಿ 27, ಪಿಡಿಪಿ 02, ಇತರರು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.ಒಟ್ಟು 90 ಕ್ಷೇತ್ರಗಳ ಪೈಕಿ ನ್ಯಾಷನಲ್ ಕಾನ್ಫರೆನ್ಸ್ 56 ಕ್ಷೇತ್ರಗಳಲ್ಲಿ ಕಾಂಗ್ರೆಸ್ 38, ಸಿಪಿಎಂ 1 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇಳಿಸಿದ್ದವು. ಬಿಜೆಪಿ 62 ಕ್ಷೇತ್ರಗಳಲ್ಲಿ ಪಿಡಿಪಿ 81 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.
90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆದಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth