ಕೊಂಕಣ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ
Konkan Railway Department Jobs 2024 — ಭಾರತೀಯ ರೈಲ್ವೆ ಇಲಾಖೆಯ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ 190 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಭಾಗದಲ್ಲಿ ಒಟ್ಟು 190 ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಷಿಪ್ ನೀಡಿ, ಇದರ ಜೊತೆಗೆ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಮಾಸಿಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಯಾವ ಯಾವ ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ? ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳನ್ನು ಹೊಂದಿರಬೇಕು? ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಅರ್ಹತೆಗಳ ವಿವರ :
ಈ ಒಂದು ನೇಮಕಾತಿಯಲ್ಲಿ ಒಟ್ಟು ಎರಡು ರೀತಿಯ ಅಪ್ರೆಂಟಿಸ್ ಷಿಪ್ ನೀಡಲಾಗುತ್ತಿದ್ದು, ಮೊದಲನೆಯದು ಗ್ರಾಜುವೇಟ್ ಅಪ್ರೆಂಟಿಸ್ ಷಿಪ್ ಹಾಗೂ ಡಿಪ್ಲೋಮಾ ಅಪ್ರೆಂಟಿಸ್ ಷಿಪ್.
* ಗ್ರಾಜುವೇಟ್ ಅಪ್ರೆಂಟಿಸ್ ಷಿಪ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು.
* ಡಿಪ್ಲೋಮಾ ಅಪ್ರೆಂಟಿಸ್ ಷಿಪ್ ಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಮುಗಿಸಿರಬೇಕು.
ಗಮನಿಸಬೇಕಾದ ವಿಷಯವೇನೆಂದರೆ ಅರ್ಜಿ ಸಲ್ಲಿಸಲು 2020 ರಿಂದ 2024ರ ಅವಧಿಯಲ್ಲಿ ಮಾತ್ರ ಅಧ್ಯಯನ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆಯನ್ನು ನೋಡುವುದಾದರೆ – ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿದ್ದು ಗರಿಷ್ಠ 25 ವರ್ಷದ ಒಳಗಿದ್ದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಷಿಪ್ ಜೊತೆಗೆ ಸಿಗುವ ಮಾಸಿಕ ಸ್ಟೈಪೆಂಡ್ ಎಷ್ಟು?
ಈ ಒಂದು ನೇಮಕಾತಿಯಲ್ಲಿ ಗ್ರಾಜುವೇಟ್ ಅಪ್ರೆಂಟಿಸ್ ಷಿಪ್ ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹4,500 ರೂ. ಸ್ಟೈಪೆಂಡ್ ನೀಡಲಾಗುತ್ತದೆ.
ಅದೇ ರೀತಿ ಡಿಪ್ಲೋಮ ಅಪ್ರೆಂಟಿಸ್ ಷಿಪ್ ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹4,000 ರೂ. ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕದ ವಿವರ :
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ಆದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳು, ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳು ಹಾಗೂ ದುರ್ಬಲ ಆರ್ಥಿಕ ವರ್ಗದವರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 2, 2024 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ : konakanrailway.com
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: