ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ನಡುವೆಯೇ ಮಣ್ಣಿನ ತೆರವು ಕಾರ್ಯಾಚರಣೆ
10/10/2024
ಕೊಟ್ಟಿಗೆಹಾರ: 2 ದಿನದಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಹಿನ್ನೆಲೆ ಗುಡ್ಡದ ಮಣ್ಣಿನ ತೆರವು ಕಾರ್ಯಾಚರಣೆ ನಿರಂತರವಾಗಿ ಮುಂದುವರಿದಿದೆ.
2 ಜೆಸಿಬಿಯಿಂದ ನಿರಂತರ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗಿದೆ. ಆಗಾಗ್ಗೆ ಸುರಿಯುತ್ತಿರೋ ಮಳೆ ಮಧ್ಯೆಯೇ ತೆರವು ಕಾರ್ಯಾಚರಣೆ ನಡೆಯಿತು.
ಭಾರೀ ನೀರು ಹರಿದು ರಸ್ತೆ ಬದಿ ಗುಂಡಿಗಳ ನಿರ್ಮಾಣವಾಗಿದ್ದು, ತಾತ್ಕಾಲಿಕವಾಗಿ ಮಣ್ಣನ್ನ ಹಾಕಿ ಗುಂಡಿಗಳನ್ನ ಅಧಿಕಾರಿಗಳು ಮುಚ್ಚುತ್ತಿದ್ದಾರೆ. ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ಮಾಡಲಾಗಿದೆ. ಹೆದ್ದಾರಿ ಪ್ರಾಧಿಕಾರದಿಂದ ಮಣ್ಣಿನ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: