ಹಿಂದುಸ್ತಾನ್ ಏರೋನಾಟಿಕಕ್ಸ್ ಲಿಮಿಟೆಡ್(HAL)ನಲ್ಲಿ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ
HAL Executive Recruitment 2024 — ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಎಕ್ಸಿಕ್ಯೂಟಿವ್ ಸೇರಿದಂತೆ ಖಾಲಿ ಇರುವಂತಹ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ವಿವರವು ಇಲ್ಲಿದೆ.
ಖಾಲಿ ಇರುವ ಹುದ್ದೆಗಳ ವಿವರ:
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಒಟ್ಟು 44 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮ್ಯಾನೇಜರ್ ಹುದ್ದೆಗಳು, ಫೈನಾನ್ಸ್ ವಿಭಾಗದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳು, ಆಫೀಸರ್ ಹುದ್ದೆಗಳು ಹಾಗೂ ಮೀಡಿಯಾ ವಿಭಾಗದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹೊರಡಿಸಿರುವ ಅಧಿಕೃತ ಅಧಿಸೂಚನೆ ಪ್ರಕಾರ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ, ಎಂ. ಎ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಅರ್ಹತೆಗಳೇನು?
ಈ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಕನಿಷ್ಠ 18 ವರ್ಷ ಹೊಂದಿರಬೇಕಾಗಿದ್ದು ಗರಿಷ್ಠ ವಯೋಮಿತಿಯು 30 ರಿಂದ 47 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಇತರೆ ಹಿಂದುಳಿದ ವರ್ಗದವರು ಹಾಗೂ ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳು 500ರೂ. ಅರ್ಜಿ ಶುಲ್ಕ ಪಾವತಿಸಬೇಕು.
* ಇನ್ನುಳಿದ ವರ್ಗದವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನಂತರದಲ್ಲಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಕೊನೆಯ ದಿನಾಂಕ: ಆನ್ಲೈನ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 30, 2024 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸುವ ಲಿಂಕ್ : https://hal-india.co.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: