ಬಿಜೆಪಿ ವಿರುದ್ಧ ಹೋರಾಡಲು ಒಗ್ಗಟ್ಟು ಅಗತ್ಯ: ಕಾಂಗ್ರೆಸ್ ಗೆ ಅಸಾದುದ್ದೀನ್ ಒವೈಸಿ ಎಚ್ಚರಿಕೆ
ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರು ಕಾಂಗ್ರೆಸ್ ಗೆ ಸಲಹೆಯೊಂದನ್ನು ನಡೆಸಿದ್ದಾರೆ. ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನ ಅಗತ್ಯವಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಕಳಪೆ ಪ್ರದರ್ಶನದ ನಂತರ, “ನೀವು ಮೋದಿಯನ್ನು ಸೋಲಿಸಲು ಬಯಸಿದರೆ, ನೀವು ಒಗ್ಗೂಡಬೇಕು ಮತ್ತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕು” ಎಂದು ಒವೈಸಿ ಹೇಳಿದ್ದಾರೆ. ನೀವು ಒಬ್ಬರೇ ಇದನ್ನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ತೆಲಂಗಾಣದ ವಿಕಾರಾಬಾದ್ ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಒವೈಸಿ, ಎಐಎಂಐಎಂ ಸಂಸದ ಇಮ್ತಿಯಾಜ್ ಜಲೀಲ್ ಈಗಾಗಲೇ ಮೈತ್ರಿ ಮಾತುಕತೆಗಾಗಿ ಕಾಂಗ್ರೆಸ್ ಅನ್ನು ಸಂಪರ್ಕಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ನವೆಂಬರ್ ನಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ, ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಸವಾಲು ಹಾಕಲು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಇಚ್ಛೆಯನ್ನು ಒವೈಸಿ ವ್ಯಕ್ತಪಡಿಸಿದ್ದಾರೆ.
“ಶಿಂಧೆ-ಫಡ್ನವೀಸ್-ಅಜಿತ್ ಪವಾರ್ ಮೂವರು ಅಧಿಕಾರಕ್ಕೆ ಮರಳುವುದನ್ನು ನಾವು ಬಯಸುವುದಿಲ್ಲ” ಎಂದು ಒವೈಸಿ ಹೇಳಿದ್ದಾರೆ. ಚರ್ಚೆಗಳನ್ನು ಪ್ರಾರಂಭಿಸುವಂತೆ ಅವರು ಕಾಂಗ್ರೆಸ್ ಅನ್ನು ಒತ್ತಾಯಿಸಿದರು. ಇಲ್ಲದಿದ್ದರೆ ಎಐಎಂಐಎಂ ಸ್ವತಂತ್ರವಾಗಿ ನಡೆಯುತ್ತದೆ ಎಂದು ಎಚ್ಚರಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth