ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸರಿಂದ 4ನೇ ಆರೋಪಿ ಬಂಧನ
ಎನ್ ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಉತ್ತರ ಪ್ರದೇಶದ ಬಹ್ರೈಚ್ ನಲ್ಲಿ ಮಂಗಳವಾರ ಬಂಧಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಬಂಧಿತ ವ್ಯಕ್ತಿಯನ್ನು 23 ವರ್ಷದ ಹರೀಶ್ ಕುಮಾರ್ ಬಲಕ್ರಮ್ ಎಂದು ಗುರುತಿಸಲಾಗಿದ್ದು, ಈತ ಶೂಟರ್ ಗಳಿಗೆ ಹಣ ಮತ್ತು ಇತರ ವ್ಯವಸ್ಥಾಪನಾ ಬೆಂಬಲವನ್ನು ಒದಗಿಸುವಲ್ಲಿ ಭಾಗಿಯಾಗಿದ್ದ.
ಬಲಕ್ರಮ್ ಮಹಾರಾಷ್ಟ್ರದ ಪುಣೆಯ ವಾರ್ಜೆ ಪ್ರದೇಶದಲ್ಲಿ ಸ್ಕ್ರ್ಯಾಪ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದರೊಂದಿಗೆ ಸಿದ್ದೀಕ್ ಹತ್ಯೆಗೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ.
ಪೊಲೀಸರು ಈ ಹಿಂದೆ ಹರಿಯಾಣ ನಿವಾಸಿ ಗುರ್ಮೈಲ್ ಬಲ್ಜಿತ್ ಸಿಂಗ್ (23), ಉತ್ತರ ಪ್ರದೇಶ ಮೂಲದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಮತ್ತು ಪುಣೆಯ ಪ್ರವೀಣ್ ಲೋಂಕರ್ ಅವರನ್ನು ಬಂಧಿಸಿದ್ದರು.
ಮತ್ತೊಬ್ಬ ಶಂಕಿತ ಶೂಟರ್ ಬಹ್ರೈಚ್ ಮೂಲದ ಶಿವಕುಮಾರ್ ಗೌತಮ್ ಪರಾರಿಯಾಗಿದ್ದಾನೆ.
ಕಶ್ಯಪ್, ಗೌತಮ್, ಪ್ರವೀಣ್ ಲೋಂಕರ್ ಮತ್ತು ಅವರ ಸಹೋದರ ಶುಭಂ ಲೋಂಕರ್ ಅವರೊಂದಿಗೆ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕಿ ಅವರ ಹತ್ಯೆಯ ಪಿತೂರಿಯಲ್ಲಿ ಬಲಕ್ರಮ್ ಭಾಗಿಯಾಗಿದ್ದ.
ಮುಂಬೈನ ನಿರ್ಮಲ್ ನಗರ ಪ್ರದೇಶದಲ್ಲಿ 66 ವರ್ಷದ ಬಾಬಾ ಸಿದ್ದೀಕ್ ಅವರನ್ನು ಅವರ ಶಾಸಕ ಪುತ್ರ ಝೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಅಡ್ಡಗಟ್ಟಿ ಗುಂಡಿಕ್ಕಿ ಕೊಂದಿದ್ದಾರೆ. ಅವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಆವಾಗಲೇ ಅವರು ಮೃತಪಟ್ಟಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth