ಪಿ.ಎಂ. ಇಂಟರ್ನ್ ಷಿಪ್ ಯೋಜನೆ: ನಿಮ್ಮ ಆಯ್ಕೆಯ ವೃತ್ತಿಯಲ್ಲಿ ತರಬೇತಿ ಪಡೆಯುವ ಅವಕಾಶ
PM — Internship Scheme 2024 — 2024 — 25 ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ವಿವಿಧ ವೃತ್ತಿಗಳಲ್ಲಿ ದೇಶದ ಯುವ ಜನರಿಗೆ ಉತ್ತಮ ಗುಣಮಟ್ಟದ ತರಬೇತಿಯ ಅವಕಾಶ ನೀಡುವ ಉದ್ದೇಶದಿಂದ ಆರಂಭಿಸಲಾದ ಯೋಜನೆಯೆ ಪಿಎಂ ಇಂಟರ್ನ್ ಷಿಪ್ ಯೋಜನೆ.
ಕೇಂದ್ರ ಸರ್ಕಾರದ ಈ ಯೋಜನೆಯ ಉದ್ದೇಶವೇನು?
ಮುಂದಿನ ಐದು ವರ್ಷದ ಒಳಗಾಗಿ ದೇಶಾದ್ಯಂತ ಒಟ್ಟು 1 ಕೋಟಿ ಯುವ ಜನತೆಗೆ ಒಟ್ಟು 500 ವಿವಿಧ ಕಂಪನಿಗಳಲ್ಲಿ ಉದ್ಯೋಗ ತರಬೇತಿಯನ್ನು ನೀಡುವುದು ಈ ಯೋಜನೆಯ ಗುರಿಯಾಗಿದೆ. ಈ ಸಾಲಿನ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ಒಟ್ಟು 1.25 ಲಕ್ಷ ಯುವ ಜನರಿಗೆ ತರಬೇತಿ ನೀಡುವ ಗುರಿ ಇಟ್ಟುಕೊಂಡಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?
ಪಿಎಂ ಇಂಟರ್ನ್ ಷಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 21 ರಿಂದ 24 ವರ್ಷದ ವಯೋಮಿತಿಯಲ್ಲಿರಬೇಕು. ಕನಿಷ್ಠ 10ನೇ ತರಗತಿ ಪಾಸಾಗಿದ್ದು ಐಟಿಐ, ಡಿಪ್ಲೋಮ ಅಥವಾ ವಿವಿಧ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕುಟುಂಬ ವಾರ್ಷಿಕ ಆದಾಯವು 8 ಲಕ್ಷ ರೂ. ಒಳಗಿರಬೇಕು.
ಎಷ್ಟು ಸ್ಟೈಪೆಂಡ್ ನೀಡಲಾಗುವುದು?
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 5,000 ರೂ. ಭತ್ಯೆ ನೀಡಲಾಗುವುದು, ಅಂದರೆ ವರ್ಷಕ್ಕೆ 60 ಸಾವಿರ ಸಾವಿರದ ಜೊತೆಗೆ ಕಾರ್ಮಿಕ ಸಚಿವಾಲಯದಿಂದ ಒಂದು ಬಾರಿ ಪ್ರತಿಯೊಬ್ಬ ಅಭ್ಯರ್ಥಿಗೆ 5,000 ರೂ. ನೀಡಲಾಗುತ್ತದೆ.
ಈ ಯೋಜನೆಗೆ ನೊಂದಣಿ ಹೇಗೆ ಮಾಡಬೇಕು?
ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು. ನೊಂದಾಯಿಸಿಕೊಳ್ಳಲು ಬೇಕಾಗಿರುವ ಅಧಿಕೃತ ಜಾಲತಾಣದ ಲಿಂಕನ್ನು ಕೆಳಗೆ ನೀಡಲಾಗಿದೆ.
ನೋಂದಾಯಿಸಿಕೊಳ್ಳಲು ಅಧಿಕೃತ ಜಾಲತಾಣ : pminternship.mca.gov.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: